Document

Pavagada: ಪಾವಗಡ ಪಟ್ಟಣದಲ್ಲಿ ತುಂಗಭದ್ರಾ ನೀರು ಸರಬರಾಜು ಹಾಗೂ ಸ್ವಚ್ಛತೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ತರಾಟೆ.

JANATAA24 NEWS DESK 

 

 

Pavagada: ಪಾವಗಡ ಪಟ್ಟಣದಲ್ಲಿ ತುಂಗಭದ್ರಾ ನೀರು ಸರಬರಾಜು ಹಾಗೂ ಸ್ವಚ್ಛತೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ತರಾಟೆ.

Pavagada

 

ಪಾವಗಡ: ಪಟ್ಟಣದ ಸುಮಾರು ನಾಲ್ಕು ಸಾವಿರ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ವಿಳಂಬವಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಸಮಾಧಾನ ವ್ಯಕ್ತಪಡಿಸಿದರು. “ತುಂಗಭದ್ರಾ ನೀರು ಬರುತ್ತಿದೆಯೇ ಇಲ್ಲವೇ ವ್ಯರ್ಥ ಮಾಡುತ್ತಿದ್ದೀರಾ? ಜನರಿಗೆ ಸರಿಯಾಗಿ ನೀರು ನೀಡಬೇಕು. ಸ್ವಚ್ಛತೆ ಕಾಪಾಡಬೇಕು,” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ಜನತೆಗೆ ಶುದ್ಧ ನೀರು ಒದಗಿಸಲು ಮುಂದಾಗಿರುವ ಸಂದರ್ಭದಲ್ಲಿ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಬಾರದು ಎಂದು ಎಚ್ಚರಿಸಿದರು.

ರೊಪ್ಪ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದಲ್ಲೇ ಚರಂಡಿಗಳು ತುಂಬಿ ತುಳುಕುತ್ತಿರುವುದು ಹಾಗೂ ಅದೇ ಚರಂಡಿಯೊಳಗೆ ಪೈಪ್‌ಲೈನ್ ಕಾಮಗಾರಿ ನಡೆಸುತ್ತಿರುವುದಾಗಿ ಸ್ಥಳೀಯರು ದೂರು ನೀಡಿದರು. ಈ ಬಗ್ಗೆ ಪಂಚಾಯಿತಿ ಪಿಡಿಒ ವಿಜಯ್ ಕುಮಾರ್ ಗಮನಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪಾವಗಡ ಪಟ್ಟಣದ 2ನೇ ವಾರ್ಡ್ ರೊಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತುಂಗಭದ್ರಾ ಹಿನ್ನೀರಿನ ಯೋಜನೆಯ ಓವರ್‌ಹೆಡ್ ಟ್ಯಾಂಕ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಸ್ಥಳೀಯರೊಂದಿಗೆ ಮಾತನಾಡಿ ಮನೆಗಳಿಗೆ ನೀರು ಸರಬರಾಜು ಆಗುತ್ತಿರುವುದೇ ಎಂಬುದಾಗಿ ವಿಚಾರಿಸಿದಾಗ, ಇಂದಿಗೂ ತುಂಗಭದ್ರಾ ನೀರು ಸರಬರಾಜು ಪ್ರಾರಂಭವಾಗಿಲ್ಲವೆಂದು ತಿಳಿದುಬಂತು. ಚರಂಡಿ ಮಾರ್ಗವಾಗಿ ಪೈಪ್‌ಲೈನ್ ಹಾಕಲು ಅವಕಾಶ ನೀಡಬಾರದೆಂದು ನಿವಾಸಿಗಳು ಒತ್ತಾಯಿಸಿದರು.

ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ಪಟ್ಟಣಕ್ಕೆ ಅಮೃತ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಒದಗಿಸುವ ಕಾಮಗಾರಿಯನ್ನೂ ಅವರು ವೀಕ್ಷಿಸಿದರು.

ನಂತರ ಖಾಸಗಿ ಪ್ರೌಢಶಾಲೆಯಾದ ಶಾರದ ವಿದ್ಯಾಪೀಠ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

 

ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಬಂದಂತಹ ಸಂದರ್ಭದಲ್ಲಿ ಪಂಚಾಯಿತಿ ನೌಕರರು ಸ್ವಚ್ಛತೆ ಮಾಡಲು ಮುಂದಾಗಿದ್ದು ವಿಶೇಷ ವಾಗಿತ್ತು.

 

 

ಈ ವೇಳೆ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಾಲೂಕು ದಂಡಾಧಿಕಾರಿ ರವಿ ವೈ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಧುಸೂದನ್, ಬಿಇಓ ರೇಣುಕಮ್ಮ, ಪುರಸಭೆ ಅಧಿಕಾರಿಗಳಾದ ಭಾಗ್ಯಮ್ಮ, ಶಂಶುದ್ದಿನ್, ಕಂದಾಯಾಧಿಕಾರಿ ಕಿರಣ್, ಜಿಲ್ಲಾ ಪಂಚಾಯತ್ ಅಭಿಯಂತರ ಬಸವಲಿಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

 

ವರದಿ: ಇಮ್ರಾನ್ ಉಲ್ಲಾ, ಪಾವಗಡ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *