

JANATAA24 NEWS DESK
Pavagada: ಶಾಸಕರಿಗೆ ಮೆಚ್ಚುಗೆ ವ್ಯಕ್ತಪಡಿಸಲು ಹೋಗಿ ಎಡವಟ್ಟು- ಅಧಿಕಾರಿಗಳು, ಆಪ್ತರ ವಿರುದ್ಧ ಆಕ್ರೋಶ.
ಪಾವಗಡ: ಪಾವಗಡ ತಾಲೂಕಿನ ಸಿಕೆಪುರ ಗ್ರಾಮದಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿಗೆ ಸಂಬಂಧಿಸಿದ ಗುದ್ದಲಿ ಪೂಜೆ ಕಾರ್ಯಕ್ರಮ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಧಿಕಾರಿಗಳು ಹಾಗೂ ಶಾಸಕರ ಕೆಲ ಆಪ್ತರು ಮಾಡಿದ ಪ್ರಚಾರದ ಎಡವಟ್ಟಿನಿಂದ ಶಾಸಕರಿಗೆ ಮುಜುಗರ ಉಂಟಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ದಿನಾಂಕ 27-07-2025 ರಂದು ಸಿದ್ದರಾಮಯ್ಯ ಅವರು ಪಾವಗಡಕ್ಕೆ ಭೇಟಿ ನೀಡಿ ಸುಮಾರು 15ರಿಂದ 30 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅದರಲ್ಲಿ ಸಿಕೆಪುರ–ದೇವರಹಟ್ಟಿ ಗ್ರಾಮ ಸಂಪರ್ಕ ಸಿಸಿ ರಸ್ತೆ ಕಾಮಗಾರಿಯೂ ಸೇರಿತ್ತು ಎನ್ನಲಾಗಿದೆ.
ಆದರೆ, ಏಳು ತಿಂಗಳ ಹಿಂದೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗೆ ಮತ್ತೆ ಸುಮಾರು 40 ಲಕ್ಷ ರೂ. ವೆಚ್ಚದ ಹೆಸರಿನಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಆಯೋಜಿಸಿ, ಶಾಸಕರಿಂದ ಪೂಜೆ ಮಾಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ವಿಶೇಷವಾಗಿ, ಮೊದಲ ಶಂಕುಸ್ಥಾಪನೆಯ ವೇಳೆ ಅಳವಡಿಸಿದ್ದ ಮುಖ್ಯಮಂತ್ರಿಯವರ ಹೆಸರಿನ ನಾಮಫಲಕವನ್ನು ಬಳಸಿಕೊಂಡೇ ಮರುಪೂಜೆ ನೆರವೇರಿಸಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳು ಹಾಗೂ ವಾಟ್ಸಾಪ್ ಗುಂಪುಗಳಲ್ಲಿ ಹರಿದಾಡುತ್ತಿವೆ.
ಈ ಬೆಳವಣಿಗೆ ಶಾಸಕರ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಅವರ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರ ಚಲನ-ವಲನವನ್ನು ತಾಲೂಕಿನ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಸಂದರ್ಭದಲ್ಲೇ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಹಾಗೂ ಆಪ್ತರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂಬುದು ಸಾವಿರಾರು ಅಭಿಮಾನಿಗಳ ಮನದಾಳದ ಮಾತಾಗಿದೆ.
ಮುಂದಿನ ದಿನಗಳಲ್ಲಿ ಇಂತಹ ಎಡವಟ್ಟುಗಳು ಮರುಕಳಿಸದಂತೆ ಸಂಬಂಧಪಟ್ಟವರು ಜಾಗ್ರತೆ ವಹಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ವರದಿ: ಇಮ್ರಾನ್ ಉಲ್ಲಾ.ಪಾವಗಡ
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.