Document

RCB : ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಆರ್ ಸಿ ಬಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್.

Janataa24 NEWS DESK

RCB : ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಆರ್ ಸಿ ಬಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್.

RCB Dinesh Karthik
Dinesh Karthik

ಬೆಂಗಳೂರು ತಂಡದ ಪ್ರಮುಖ ವಿಕೆಟ್ ಕೀಪರ್ ಒಬ್ಬರು ನಿವೃತ್ತಿ ಘೋಷಿಸುವ ಮೂಲಕ ತಂಡಕ್ಕೆ ಅಘಾತ ನೀಡಿದ್ದಾರೆ. ಅವರ ಸ್ಥಾನ ತುಂಬುವ ಮತ್ತೊಬ್ಬ ಆಟಗಾರ ಯಾರು ಎಂದು ಕಾದು ನೋಡಬೇಕಿದೆ. ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್(Dinesh Karthik) ತಮ್ಮ ನಿವೃತ್ತಿ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಿಪಡಿಸಿದ್ದಾರೆ.

ನಿನ್ನೆ ನಡೆದ ಮೊದಲ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಸಿಎಸ್ ಕೆ, ನಡುವಿನ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ತಮ್ಮ ನಿವೃತ್ತಿ ನಿರ್ಧಾರವನ್ನು ಮತ್ತೊಮ್ಮೆಸ್ಪಷ್ಟಿಪಡಿಸುವ ಮೂಲಕ ಆರ್ ಸಿ ಬಿ ತಂಡಕ್ಕೆ ಸಂದೇಶ ರವಾನಿಸಿದ್ದಾರೆ.

ಭಾರತದ ಪ್ರತಿಭಾವಂತ ಹಾಗೂ ಅನುಭವುಳ್ಳ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಆರಂಭದಿಂದಲೂ ಐಪಿಎಲ್‌ನಲ್ಲಿ ಉಳಿದಿದ್ದರು . ಇದುವರೆಗೆ ಅವರು ಆರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ ಕಾರ್ತಿಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕರೂ ಆಗಿದ್ದರು.

ಈ ವರ್ಷದ ಐಪಿಎಲ್ 17ನೇ ಸೀಸನ್ ಆರಂಭಕ್ಕೂ ಮುನ್ನವೇ ಇದು ಕಾರ್ತಿಕ್ ಅವರ ಐಪಿಎಲ್ ಕೊನೆಯ ಸೀಸನ್ ಎಂಬ ವರದಿಗಳು ಬಂದಿದ್ದವು. ಅದರಂತೆ ಸಿ.ಎಸ್.ಕೆ. ವಿರುದ್ಧದ ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ತಿಕ್ ಗೆ ಚೆಪಾಕ್‌ನಲ್ಲಿ ಇದು ನಿಮ್ಮ ಕೊನೆಯ ಪಂದ್ಯವೇ ಎಂಬ ಪ್ರಶ್ನೆ ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಅವರು ‘ಚೆಪಾಕ್ನಲ್ಲಿ ಪ್ಲೇ-ಆಫ್ ಪಂದ್ಯವನ್ನು ಆಯೋಜಿಸುವ ಸಾಧ್ಯತೆ ಇರುವುದರಿಂದ ನಾನು ಇಲ್ಲಿ ಇನ್ನೊಂದು ಪಂದ್ಯ ಆಡಬಹುದು. ಒಂದು ವೇಳೆ ನಮ್ಮ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯದಿದ್ದರೆ, ಇದು ಈ ಮೈದಾನದಲ್ಲಿ ನನ್ನ ಕೊನೆಯ ಪಂದ್ಯ ಎಂದಿದ್ದಾರೆ.

ಸಿಎಸ್‌ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಕಂಗೆಟ್ಟಿದ್ದ ಆರ್‌ಸಿಬಿ ಪರ ಕಾರ್ತಿಕ್ ಅನುಜ್ ರಾವತ್ ಜೊತೆಗೂಡಿ ಆರನೇ ವಿಕೆಟ್ಗೆ 50 ಎಸೆತಗಳಲ್ಲಿ 95 ರನ್ ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಈ ವೇಳೆ ಕಾರ್ತಿಕ್ 26 ಎಸೆತಗಳಲ್ಲಿ ಔಟಾಗದೆ 38 ರನ್ ಗಳಿಸಿ ಮಹತ್ವದ ಇನ್ನಿಂಗ್ಸ್ ಆಡಿದರು. ರಾವತ್ ಮತ್ತು ಕಾರ್ತಿಕ್ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಆರ್‌ಸಿಬಿ 173 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಆದಾಗ್ಯೂ, ಈ ಪಂದ್ಯವನ್ನು ಚೆನ್ನೈ ಆರು ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Mandya : ಸಕ್ಕರೆ ನಗರಿ ಮಂಡ್ಯದಿಂದ ಸುಮಲತಾಗೆ ಬಿಜೆಪಿ ಟಿಕೆಟ್ ಮಿಸ್

Document

Leave a Reply

Your email address will not be published. Required fields are marked *