JANATAA24 NEWS DESK
Tumkur: ಬಾಣಾವರ ಗೇಟ್ ಬಳಿ 3 ಕಾರುಗಳ ನಡುವೆ ಸರಣಿ ಅಪಘಾತ– ಇಬ್ಬರು ಸ್ಥಳದಲ್ಲೇ ಸಾ**

ತುಮಕೂರು:ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಬಾಣಾವರ ಗೇಟ್ ಬಳಿ ಮೂರು ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೆಡಿಎಸ್ ವಕ್ತಾರರೊಬ್ಬರ ಸ್ಥಿತಿ ಗಂಭೀರವಾಗಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ರಾಮಕೃಷ್ಣ ಗಾಯಗೊಂಡಿದ್ದಾರೆ.
ನಗರದ ಯಾದವನಗರದ ಸುರೇಶ್ (55) , ಮುರಳಿ (52) ಮೃತಪಟ್ಟಿರತ್ತಾರೆ. ಜೆಡಿಎಸ್ ವಕ್ತಾರ ಜಯಣ್ಣ ಸ್ಥಿತಿ ಗಂಭೀರವಾಗಿದೆ. ಮೃತ ಸುರೇಶ್ ಗುಬ್ಬಿ ತಾ ಪಂ ಮಾಜಿ ಸದಸ್ಯ. ಸೈಬರ್ ಕ್ರೈಂ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ 5 ಮಂದಿ ಗಾಯಗೊಂಡಿದ್ದಾರೆ.
ರಾಮಕೃಷ್ಣಪ್ಪ ಸ್ನೇಹಿತರ ಜತೆಗೆ ಆದಿಚುಂಚನಗಿರಿಗೆ ಹೋಗಿ ಕುಣಿಗಲ್ ಮಾರ್ಗವಾಗಿ ವಾಪಸ್ ಆಗುತ್ತಿದ್ದರು. ಇದೇ ವೇಳೆ ತುಮಕೂರು ಕಡೆಯಿಂದ ತೆರಳುತ್ತಿದ್ದ ಕಾರು ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎದುರುಗಡೆ ಬರುತ್ತಿದ್ದ ರಾಮಕೃಷ್ಣಪ್ಪ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದೇ ಕಾರಿನಲ್ಲಿದ್ದ ಸುರೇಶ್, ಮುರಳಿ ಮೃತಪಟ್ಟಿದ್ದಾರೆ.
ಈ ಸಂಬಂಧ ಹೆಬ್ಬರೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.