Document

Siddaramaiah: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ.

Janataa24 NEWS DESK


Siddaramaiah: There is no need to hand over the Prajwal Revanna case to the CBI.

There is no need to hand over the Prajwal Revanna case to the CBI


ಬೆಂಗಳೂರು: ಪ್ರಜ್ವಲ್‌ ರೇವಣ್ಣ(Prajwal Revanna) ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ.


ಬಿಜೆಪಿ(BJP)ಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ?

ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು.
ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು.

ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ(Special Investigation Team)ರಚನೆ ಮಾಡಿದ್ದೇವೆ.
ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ(International) ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ?


ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌(DK Shivakumar) ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ. ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣ ಟ್ವಿಟ್(X) ಮೂಲಕ ಪ್ರಜ್ವಲ್ ರೇವಣ್ಣ ಪೆನ್-ಡ್ರೈವ್ ಪ್ರಕರಣವನ್ನು ಸಿಬಿಐ ಗೆ ವಹಿಸುವುದಿಲ್ಲವೆಂದು ಹೇಳಿಕೆ ನೀಡಿರುತ್ತಾರೆ.


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv


https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://www.janataa24.com/in-the-wake-of-sslc-results-parents-entered-the/

Document

Leave a Reply

Your email address will not be published. Required fields are marked *