JANATAA24 NEWS DESK
Tiptur: ಮನುಷ್ಯನಿಗೆ ಶಾಂತಿ,ನೆಮ್ಮದಿ ಸಿಗಬೇಕಾದರೆ ಶಿಕ್ಷಣ ಅತ್ಯಗತ್ಯ– ಶ್ರೀ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ.

ಶ್ರೀ ಬಸವೇಶ್ವರ ರೆಸಿಡೆನ್ಸಿಯಲ್ ಹೈಸ್ಕೂಲ್ ನ ಶಾಲಾ ವಾರ್ಷಿಕೋತ್ಸವ ಸಮಾರಂಭ.
ತಿಪಟೂರು: ಮನುಷ್ಯನಿಗೆ ಶಾಂತಿ, ನೆಮ್ಮದಿ ಸಿಗಬೇಕಾದರೆ ಇಂದಿನ ದಿನದಲ್ಲಿ ಶಿಕ್ಷಣ ಅತ್ಯಗತ್ಯವಾಗಿದ್ದು, ಮಕ್ಕಳಲ್ಲಿ ಧರ್ಮ, ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ತಮ್ಮಡಿಹಳ್ಳಿ ವಿರಕ್ತ ಮಠದ ಶ್ರೀ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಶ್ರೀ ಬಸವೇಶ್ವರ ರೆಸಿಡೆನ್ಸಿಯಲ್ ಹೈಸ್ಕೂಲ್ ನ ಆವರಣದಲ್ಲಿ, 2025-26 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಪೋಷಕರು ತಮ್ಮ ಮಕ್ಕಳಿಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ತೋರುವಂತೆ, ಶಿಕ್ಷಣದ ಜೊತೆಗೆ ಕ್ರೀಡೆ, ಗ್ರಾಮೀಣ ಭಾಗದ ಕಲಿಯಲು ಉಳಿಸಿ, ಬೆಳೆಸಲು ಮುಂದಾಗಬೇಕಾಗಿದೆ. ಆದಷ್ಟು ಪೋಷಕರು, ಮಕ್ಕಳು ಮೊಬೈಲ್ ಬಳಕೆಯಿಂದ ದೂರ ಇರುವಂತೆ ಜಾಗೃತಿ ಮೂಡಿಸುವ ಹಾಗೂ ನೋಡಿಕೊಳ್ಳುವ ಸಂದರ್ಭ ಬಂದಿದೆ ಹಾಗೂ ವ್ಯಾಯಾಮ, ಯೋಗಾಸನದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಕಿವಿಮಾತು ತಿಳಿಸಿದರು.
ತುಮಕೂರಿನ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಡಾ.ಹೆಚ್.ವರ್ಷ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಸೇರಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಸ್ಟ್ ಫುಡ್ ಗೆ ದಾಸರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಪಾಠ, ಪ್ರವಚನ ನೀಡಿ ಪೌಷ್ಟಿಕಾಂಶವುಳ್ಳ ತರಕಾರಿ ಮತ್ತು ಆಹಾರ ಸೇವನೆ ಮಾಡುವಂತೆ ತಿಳಿಸಿ, ಆತ್ಮಸಾಕ್ಷಿಯನ್ನು ಸಂಪಾದಿಸುವಂತೆ ಕರೆ ನೀಡಬೇಕು. ಗುರು-ಹಿರಿಯರಿಗೆ ಗೌರವ ಸೂಚಿಸುವ ಪ್ರಜೆಯಾಗಿ ಬೆಳೆಯಬೇಕೆಂದು ತಿಳಿಸಿದರು.
ನಿವೃತ್ತ ಶಿಕ್ಷಕ ಎಂ.ಆರ್. ಸೋಮಶೇಖರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸುಮಾರು 40 ವರ್ಷಗಳಿಂದ ಉತ್ತಮವಾದ ಪರಿಸರ, ಬೋಧನೆ, ಶಿಸ್ತು ಪರಿಪಾಲನೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿರುವ ಶ್ರೀ ಬಸವೇಶ್ವರ ವಿದ್ಯಾ ಸಂಸ್ಥೆ ಹಾಲಪ್ಪನವರ ಮತ್ತು ಸಿಬ್ಬಂದಿಗಳ ಪರಿಶ್ರಮದಿಂದ ಬೃಹದಾಕಾರಾಗಿ ಬೆಳೆದು, ಬಸವಣ್ಣನವರ ಅನುಭವ ಮಂಟಪದಂತೆ ಎಲ್ಲರಿಗೂ ಸಮಾನತೆ, ಸಹಬಾಳ್ವೆ ನೀಡುವುದರೊಂದಿಗೆ, ಈ ವಿದ್ಯಾ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವುದು ಗೊತ್ತಾಗಿದೆ. ಹಾಗೂ ಈ ವೇದಿಕೆಯಲ್ಲಿ ಸನ್ಮಾನಿಸುತ್ತಿರುವುದು ತುಂಬಾ ಸಂತೋಷಕರ. ಈ ಗ್ರಾಮೀಣ ಭಾಗದ ಶಾಲೆಯನ್ನು ಉಳಿಸಿ, ಬೆಳೆಸಲು ಪೋಷಕರ ಸಹಕಾರ ಇನ್ನು ಹೆಚ್ಚಿನ ರೀತಿಯಲ್ಲಿ ದೊರಕಲಿ ಎಂದು ತಿಳಿಸಿದರು.
ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹೆಚ್.ಎನ್. ಹಾಲಪ್ಪ ಮಾತನಾಡಿ, ಪೋಷಕರ ಮತ್ತು ಸಿಬ್ಬಂದಿಗಳ ಸಹಕಾರದಿಂದ ಇಂತಹ ವಿದ್ಯಾಸಂಸ್ಥೆಯನ್ನು ಗ್ರಾಮೀಣ ಭಾಗದಲ್ಲಿ ಸ್ಥಾಪಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗಿದೆ. ಈ ಭರತ ಖಂಡದಲ್ಲಿ ಜ್ಞಾನವೇ ವರ್ಧಮಾನ ಆಗಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜು, ಶಿಕ್ಷಣ ಸಂಯೋಜಕ ನಂದೀಶ್, ಅರಸೀಕೆರೆ ರಾಯಲ್ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ಮಂಜುನಾಥ, ಪತ್ರಕರ್ತ ಬಿ.ಟಿ. ಕುಮಾರ್, ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯರಾದ ಡಾ. ಕೆ.ಎನ್.ಸುಮಂತ್, ಡಾ.ವಚನ್, ಡಾ.ಮಿಥುನ್, ದಸರೀಘಟ್ಟ ಆರೋಗ್ಯ ಕೇಂದ್ರದ ಡಾ.ಹೆಚ್.ಎಲ್. ಮನೋಜ್, ಸಿ.ಆರ್.ಪಿ ಉಮೇಶ್,ಅರಸೀಕೆರೆ ಪೊಲೀಸ್ ಇಲಾಖೆಯ ರಮ್ಯ,ಗ್ರಾ ಪಂ ಮಾಜಿ ಅಧ್ಯಕ್ಷ ಸೋಮಶೇಖರ್, ಹಿರಿಯೂರು ಶಿಕ್ಷಕ ಜಯಣ್ಣ, ಉಪನ್ಯಾಸಕ ದಯಾನಂದ್, ಹೈಸ್ಕೂಲ್ ಮುಖ್ಯ ಶಿಕ್ಷಕಿ ಲೋಲಾಕ್ಷಮ್ಮ ಮತ್ತು ಶಾಲಾ ಮು. ಶಿಕ್ಷಕಿ ಜ್ಯೋತಿ ಸೇರಿದಂತೆ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.
ವರದಿ :ಮಂಜುನಾಥ್ ಡಿ ತಿಪಟೂರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.