Document

Tumkur: ಅಂತರ್ ರಾಜ್ಯ ರಾಬರಿ,ಡಕಾಯತಿ,ಕೊಲೆ ಪ್ರಕರಣ ಭೇಧಿಸಿದ ಪೊಲೀಸರು–ಐವರ ಪೈಕಿ ನಾಲ್ವರು ಆರೋಪಿಗಳ ಬಂಧನ.

JANATAA24 NEWS DESK 

 

Tumkur: ಅಂತರ್ ರಾಜ್ಯ ರಾಬರಿ,ಡಕಾಯತಿ,ಕೊಲೆ ಪ್ರಕರಣ ಭೇಧಿಸಿದ ಪೊಲೀಸರು–ಐವರ ಪೈಕಿ ನಾಲ್ವರು ಆರೋಪಿಗಳ ಬಂಧನ.

20260116 223357

ಹುಳಿಯಾರು: ಅಂತರ್ ರಾಜ್ಯ ಮಟ್ಟದಲ್ಲಿ ರಾಬರಿ, ಡಕಾಯತಿ ಹಾಗೂ ಕೊಲೆ ಪ್ರಕರಣಗಳಲ್ಲಿ ತೊಡಗಿದ್ದ ಅಪರಾಧಿಗಳ ಗುಂಪೊಂದನ್ನು ತುಮಕೂರು ಜಿಲ್ಲಾ ಪೊಲೀಸರು ಭೇದಿಸುವಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಜನವರಿ 11, 2026 ರಂದು ರಾತ್ರಿ ಸುಮಾರು 11 ಗಂಟೆ ವೇಳೆಗೆ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರೆ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿತ್ತು. ಮಂಜುನಾಥ ಕೆ.ಎಂ. ಎಂಬುವರ ಹೊಸ ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು ಮನೆಯವರ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಮಂಜುನಾಥ ಅವರನ್ನು ಹತ್ಯೆ ಮಾಡಿದ್ದರು. ಬಳಿಕ ದರೋಡೆ ನಡೆಸಿ ಪರಾರಿಯಾಗಿದ್ದರು.

ಈ ಸಂಬಂಧ ಮೃತರ ಹಿರಿಯ ಮಗಳು ಅನುಷಾ ಅವರು ನೀಡಿದ ದೂರಿನ ಮೇರೆಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮುಖಕ್ಕೆ ಮಾಸ್ಕ್ ಧರಿಸಿ, ತಲೆಗೆ ಬಟ್ಟೆ ಕಟ್ಟಿಕೊಂಡು ಕಣ್ಣು ಮಾತ್ರ ಕಾಣುವಂತೆ ಮಾಡಿಕೊಂಡು ಕೃತ್ಯ ಎಸಗಿದ್ದರಿಂದ ಗುರುತು ಪತ್ತೆ ಕಷ್ಟವಾಗಿತ್ತು.

ಪ್ರಕರಣದ ಗಂಭೀರತೆಯನ್ನು ಮನಗಂಡ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತೀವ್ರ ತನಿಖೆ ನಡೆಸಲಾಗಿತ್ತು. ಅದರ ಫಲವಾಗಿ ಜನವರಿ 13, 2026 ರಂದು ಐವರು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಟಧಿಕಾರಿ (SP) ಅಶೋಕ್ ಮಾಹಿತಿ ತಿಳಿಸಿದ್ದಾರೆ.

ವರದಿ :ದೇವರಾಜು R ಚಿಕ್ಕನಾಯಕನಹಳ್ಳಿ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *