Janataa24 NEWS DESK
Turuvekere: ಆಸ್ತಿ ವಿಚಾರಕ್ಕಾಗಿ ಜಗಳ ತಮ್ಮನನ್ನೇ ಕೊಂ*ದ 60 ವರ್ಷದ ಕೃಷ್ಣಪ್ಪ.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಬ್ಯಾಲಹಳ್ಳಿ ಗ್ರಾಮದ ವಾಸಿ ರಾಮಯ್ಯನ ಮಕ್ಕಳಾದ ಶ್ರೀನಿವಾಸ್ ಮತ್ತು ಕೃಷ್ಣಪ್ಪ ಅವರು ಗುರುವಾರ ಅಂದರೆ ಇಂದು ಬೆಳಗ್ಗೆ ಸರಿ ಸುಮಾರು 8 ರಿಂದ 9 ಗಂಟೆ ಸಮಯದಲ್ಲಿ ಬ್ಯಾಲಹಳ್ಳಿ ಗ್ರಾಮದಿಂದ ಕಪ್ಪೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ತಮ್ಮ ತೋಟದ ಹತ್ತಿರದ ಬಳಿ ಜಮೀನು ವಿಚಾರವಾಗಿ ಮಾತಿನ ಚಕಮಕಿ ನಡೆದು ಒಬ್ಬರಿಗೊಬ್ಬರು ಕಿತ್ತಾಡಿಕೊಂಡು 60 ವರ್ಷದ ಕೃಷ್ಣಪ್ಪ ಎಂಬ ವ್ಯಕ್ತಿ ತನ್ನ ತಮ್ಮನಾದ 55 ವರ್ಷದ ಶ್ರೀನಿವಾಸನನ್ನು ಮಾರಕಸ್ತ್ರಗಳಿಂದ ಹಲ್ಲೆ ಮಾಡಿದ್ದು ಶ್ರೀನಿವಾಸ್ ರಕ್ತದ ಮಡುವಿನಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಮಹಾಜರ್ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರ ನಡುವೆ ನಡೆದ ಜಗಳದಲ್ಲಿ ತಮ್ಮನಾದ ಶ್ರೀನಿವಾಸ್ ಮೃತಪಟ್ಟಿದ್ದು ಅಣ್ಣನಾದ ಕೃಷ್ಣಪ್ಪ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ ಒಟ್ಟಾರೆ ಇನ್ನೂ ಕೂಡ ಯಾವ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಎಂಬ ನಿಖರ ಮಾಹಿತಿ ಇಲ್ಲದಿರುವುದರಿಂದ ಪೊಲೀಸರು ವಿಚಾರಣೆಯನ್ನು ಚುರುಕು ಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.