JANATAA24 NEWS DESK
Turuvekere: ೭೦ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಮಾಡಿದ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ಹನುಮೇಗೌಡ.

ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆಲವು ದಿನಗಳ ಹಿಂದೆ ಎಷ್ಟೇ ನೂತನವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಶಶಿಕಾಲ ಹನುಮೇಗೌಡ ಅವರಿಂದ ಧ್ವಜಾರೋಹಣ ನಡೆಸಿ ಗೌರವ ಸಮರ್ಪಿಸಲಾಯಿತು.
ಇದೇ ಸಂದರ್ಭದಲ್ಲಿ ಹದಿನಾರು ಸದಸ್ಯ ಬಲವುಳ್ಳ ಈ ಗ್ರಾಮ ಪಂಚಾಯಿತಿಯ ಪ್ರತಿಯೊಬ್ಬ ಜನಪ್ರತಿನಿಧಿಗಳು ಮತ್ತು ಪಂಚಾಯತಿ ಅಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗ ಶಿಸ್ತಿನ ಸಿಪಾಯಿಗಳಂತೆ ಶಾಲುಗಳನ್ನು ಧರಿಸಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರಧ್ವಜಕ್ಕೆ ಮತ್ತು ಕನ್ನಡ ಧ್ವಜಕ್ಕೆ ಗೌರವ ಸಮರ್ಪಿಸಿದರು.
ಇದಲ್ಲದೆ ವಿಶೇಷವಾಗಿ ಮೊಟ್ಟ ಮೊದಲ ಬಾರಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾರ್ವಜನಿಕರಿಗೆ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಸಾರ್ವಜನಿಕರು ಅನ್ನದಾಸೋಹದಲ್ಲಿ ಪಾಲ್ಗೊಂಡಿದ್ದರು ಇದರ ಹಿನ್ನೆಲೆ ಸಾರ್ವಜನಿಕ ವಲಯದಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೇರಿದಂತೆ ಜನಪ್ರತಿನಿಧಿಗಳು ಪ್ರಶಂಸೆಗೆ ಪಾತ್ರರಾದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.