Document

Turuvekere: ಒಳ ಮೀಸಲಾತಿ ಹೋರಾಟಗಾರರಿಂದ ಶಾಸಕರಿಗೆ ಮನವಿ

JANATAA24 NEWS DESK 

 

 

Turuvekere: ಒಳ ಮೀಸಲಾತಿ ಹೋರಾಟಗಾರರಿಂದ ಶಾಸಕರಿಗೆ ಮನವಿ.

 Turuvekere

ತುರುವೇಕೆರೆ: ತಾಲ್ಲೂಕಿನ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂಟಿ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

 

ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿನ 56,432 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ದಿನಾಂಕ 27.02.2026 ರಂದು ಸೂಚಿಸಿರುವ ಹಿನ್ನೆಲೆಯಲ್ಲಿ, ಈ ನೇಮಕಾತಿಯನ್ನು ಒಳಮೀಸಲಾತಿ ಅಳವಡಿಸದೇ ನಡೆಸುವ ಸಾಧ್ಯತೆ ಇರುವುದರಿಂದ ಮಾದಿಗ ಸಮುದಾಯದ ಪರವಾಗಿ ಆತಂಕ ವ್ಯಕ್ತಪಡಿಸಲಾಯಿತು. ಸರ್ಕಾರ ಒಂದು ಕಡೆ ಒಳಮೀಸಲಾತಿ ಜಾರಿಗೆ ಆದೇಶ ನೀಡಿದ್ದು, ಮತ್ತೊಂದೆಡೆ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಅನುಸರಿಸದಿರುವುದು ಸಮುದಾಯಕ್ಕೆ ಅನ್ಯಾಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.

ಈಗಾಗಲೇ ಒಳಮೀಸಲಾತಿ ಕುರಿತ ಕಾಯ್ದೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಅಂಕಿತವೂ ಪಡೆದಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕು ಇಲ್ಲವಾದಲ್ಲಿ ಮಾದಿಗ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಯಿತು.

 

ಈ ಸಂದರ್ಭದಲ್ಲಿ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರಕುಮಾರ್ ತಾಲೂಕು ಸಂಚಾಲಕ ಮಲ್ಲೂರು ತಿಮ್ಮೇಶ್, ಒಳ ಮೀಸಲಾತಿ ಹೋರಾಟಗಾರರು ಉಪಸ್ಥಿತರಿದ್ದರು.

 

 

ವರದಿ:ಮಂಜುನಾಥ್ ತುರುವೇಕೆರೆ.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *