Document

Turuvekere: ಸಿಲಿಂಡರ್ ಗಾಗಿ ಗ್ಯಾಸ್ ಏಜೆನ್ಸಿ ಮುಂದೆ ಸಾಲು ಸಾಲು ಗ್ರಾಹಕರು.

JANATAA24 NEWS DESK 

 

 

Turuvekere: ಸಿಲಿಂಡರ್ ಗಾಗಿ ಗ್ಯಾಸ್ ಏಜೆನ್ಸಿ ಮುಂದೆ ಸಾಲು ಸಾಲು ಗ್ರಾಹಕರು.

Turuvekere

ತುರುವೇಕೆರೆ: ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಗ್ಯಾಸ್ ಸಿಲಿಂಡರ್ಗಳ ಅಭಾವದ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆಯಿಂದಲೆ ಪಟ್ಟಣದ ಬಾಣಸಂದ್ರ ರಸ್ತೆಯಲ್ಲಿರುವ ಗ್ಯಾಸ್ ಏಜೆನ್ಸಿ ಮುಂಬಾಗ ನೂರಾರು ಗ್ರಾಹಕರು ಸಾಲುಗಟ್ಟಿ ಸಿಲಿಂಡರ್ ಗಾಗಿ ಕಾದು ಕುಳಿತಿದ್ದಾರೆ, ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದಲ್ಲಿದ್ದ ಗ್ರಾಹಕರಿಗೆ ಸಿಲಿಂಡರ್ ನಿಂದಾಗಿ ಆತಂಕ ಎದುರಾಗಿದೆ ಎನ್ನಬಹುದು.

 

 

ಅಮೆರಿಕ, ಇರಾನ್, ಇಸ್ರೇಲ್, ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಹಬ್ಬದ ಅಡಿಗೆ ತಯಾರಿಗೆ ಸಿಲಿಂಡರ್ ಅಗತ್ಯವಾಗಿದ್ದು ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ಸುಗಮಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಲಿ.

 

CM Siddaramaiah: ಎಲ್ ಪಿ ಜಿ ಅಭಾವ ನೀಗಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ.

ಈ ನಡುವೆ, ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

https://x.com/siddaramaiah/status/2033121639479607321?t=7SQrtCk7I0M3U3eK4tWYmw&s=19

ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಿಸುವ ಭರವಸೆ ನೀಡಿದ್ದಾರೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *