Janataa24 NEWS DESK
Turuvekere: ಬೈಕ್ ಸವಾರರ ಮೇಲೆ ಹರಿದ KSRTC ಬಸ್– ದ್ವಿಚಕ್ರ ವಾಹನ ಸವಾರರ ಸ್ಥಿತಿ ಚಿಂತಾಜನಕ.

ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಮೈಸೂರು ತಿಪಟೂರು ಬಸ್ ದಬ್ಬೇಘಟ್ಟ ರಸ್ತೆಯಲ್ಲಿ ಸಂಚರಿಸುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯಗಳಾಗಿದ್ದು ಅದರಲ್ಲಿ ಒಬ್ಬರಿಗೆ ಒಂದು ಕಾಲು ಪೂರ್ಣ ನುಚ್ಚು ಗೊಜ್ಜಾಗಿದ್ದು, ಆತನನ್ನು ಶ್ರೀ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೋರ್ವ ವ್ಯಕ್ತಿಗೂ ಆತನನ್ನು ಸಹ ಆಸ್ಪತ್ರೆಗೆ ರವಾನಿಸಲಾಗಿದೆ.
ಒಟ್ಟಾರೆ ಪಟ್ಟಣದಲ್ಲಿರುವ ದಬ್ಬೇಘಟ್ಟ ರಸ್ತೆ ಅಗಲೀಕರಣವಾಗದೆ ಚಿಕ್ಕ ರಸ್ತೆಯಾಗಿದ್ದು ಇಲ್ಲಿಯವರೆಗೆ ಯಾರೊಬ್ಬರೂ ಕೂಡ ಇತ್ತಕಡೆ ಸಂಬಂಧಪಟ್ಟವರು ಈ ರಸ್ತೆಯ ಬಗ್ಗೆ ಗಮನ ಹರಿಸದೆ ರಸ್ತೆ ಅಗಲೀಕರಣ ಮಾಡದೇ ಇರುವುದೇ ಮುಖ್ಯ ಕಾರಣವಾಗಿದ್ದು,
ಇಡೀ ತಾಲೂಕಿನ ಜನತೆ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ.
ಇದೇ ರೀತಿಯಾದರೆ ಮುಂದಿನ ದಿನಗಳಲ್ಲಿ ಇನ್ನೂ ಎಷ್ಟು ಜೀವಗಳನ್ನು ಬಲಿಪಡೆಯಲು ದಬ್ಬೇಘಟ್ಟ ರಸ್ತೆ ಹೀಗೆ ಇರುತ್ತದೆ ಊಹಿಸಲು ಸಾಧ್ಯವಿಲ್ಲ.
ವರದಿ:ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.