JANATAA24 NEWS DESK
Turuvekere: ಭೂ-ಮಾಫಿಯ ವಿರುದ್ಧ ಪ್ರತಿಭಟನೆ ಎಂಟನೇ ದಿನಕ್ಕೆ,

ತುರುವೇಕೆರೆ: ತಾಲೂಕು ಕಚೇರಿ ಆವರಣದಲ್ಲಿ ಈಗಾಗಲೇ ಸತತ ಎಂಟು ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಪ್ರೊಫೆಸರ್ ಬಿ, ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ತುರುವೇಕೆರೆ ತಾಲೂಕಿನ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ ಬಿಸಿ ಕಾವಲ್ ಗ್ರಾಮದಲ್ಲಿರುವ ಸರ್ವೆ ನಂಬರ್ 1 ರಲ್ಲಿ ಹಲವು ದಶಕಗಳಿಂದ ಸ್ಥಳೀಯ ರೈತರು ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು ಸರ್ಕಾರದಿಂದ ಸಾಗುವಳಿ ಚೀಟಿ ಪಡೆದಿದ್ದರು ಸಹ ಕೆಲವು ಭೂ ಮಾಫಿಯಾ ಹಾಗೂ ಸಂಘಟನೆಯ ಹೆಸರನ್ನು ಹೇಳಿಕೊಂಡು ಕೆಲ ವ್ಯಕ್ತಿಗಳು ಭೂಮಿಯನ್ನು ಕಬಳಿಸಲು ಯತ್ನಿಸುತ್ತಿದ್ದು ಇದರ ಸಂಬಂಧ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿರುವ ಅಧಿಕಾರಿಗಳು ಹಾಗೂ ಭೂ ಮಾಫಿಯಾ ವಿರುದ್ಧ ಅಹೋರಾತ್ರಿ ಧರಣಿ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು.
ಇಲ್ಲಿಯವರೆಗೂ ತಾಲೂಕು ಆಡಳಿತವಾಗಲಿ ಜಿಲ್ಲಾ ಆಡಳಿತಕ್ಕೆ ಸಂಬಂಧಪಟ್ಟಂತೆ ಯಾವೊಬ್ಬ ಅಧಿಕಾರಿಯು ಪ್ರತಿಭಟನಾ ಸ್ಥಳಕ್ಕೆ ಭಾರದ ಕಾರಣ ಇಂದು ತಾಲೂಕು ಕಚೇರಿ ಮುಂಭಾಗದಲ್ಲಿರುವ ಬಾಣಸಂದ್ರ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು, ಮೊದಲಿಗೆ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಜಾಥ ನಡೆಸುತ್ತಾ,
ಸರ್ಕಾರದ ವಿರುದ್ಧ ಹಾಗೂ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತದ ವಿರುದ್ಧ ದಿಕ್ಕಾರಗಳನ್ನು ಕೂಗುತ್ತಾ ಪ್ರತಿಭಟಿಸುತ್ತಾ ಬಾಣಸಂದ್ರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲಾ ಸಂಘಟನಾ ಸಂಚಾಲಕ ಕುಮಾರ್, ತಾಲೂಕು ಸಂಚಾಲಕ ತಿಮ್ಮೇಶ್, ರೈತ ಸಂಘದ ಶ್ರೀನಿವಾಸ್ ಇನ್ನು ಹಲವು ಮುಖಂಡರ ಉಪಸ್ಥಿತಿಯಲ್ಲಿ ನೂರಾರು ರೈತರೊಂದಿಗೆ ತಾಲೂಕು ಆಡಳಿತದ ಬೇಜವಾಬ್ದಾರಿಯನ್ನು ಖಂಡಿಸಿ ಸ್ಥಳೀಯ ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
ಇದೇ ಸಂದರ್ಭದಲ್ಲಿ ಪಾಲ್ಗೊಂಡ ಮುಖಂಡರುಗಳು ಮಾತನಾಡಿ ಸರ್ಕಾರದಿಂದ ಸಾಗುವಳಿ ಚೀಟಿ ಪಡೆದಿದ್ದರೂ ದಾಖಲಾತಿಗಳನ್ನು ನಕಲಿ ಸಹಿಗಳಿಂದ ಪೋರ್ಜರಿ ಮಾಡಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಬೇನಾಮಿ ವ್ಯಕ್ತಿಗಳ ಹೆಸರಿನಲ್ಲಿ ಸ್ಥಳೀಯ ರೈತರು ಪಡೆದಿರುವ ಸಾಗುವಳಿ ಚೀಟಿ ಜಮೀನುಗಳಿಗೆ ಅಕ್ರಮವಾಗಿ ಭೂ ಮಾಫಿಯಾ ನಡೆಸುವ ವ್ಯಕ್ತಿಗಳೊಂದಿಗೆ ಹಾಗೂ ಸಂಘಟನೆಯ ಹೆಸರನ್ನು ಹೇಳಿಕೊಂಡು ಕೆಲ ವ್ಯಕ್ತಿಗಳು ರೈತರ ಜಮೀನನ್ನು ಕಬಳಿಸಲು ಉನ್ನಾರ ನಡೆಸುತ್ತಿದ್ದು ಇದನ್ನು ರೈತರು ಪ್ರಶ್ನಿಸಲು ಹೋದರೆ ಜಾತಿ ನಿಂದನೆ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.
ಸಂಘಟನೆಗಳ ಹೆಸರನ್ನು ಹೇಳಿಕೊಂಡು ಬಂದಿರುವ ದಲ್ಲಾಳಿಗಳು ರೈತರಿಗೆ ಮತ್ತು ಅಧಿಕಾರಿಗಳಿಗೆ ಜೀವ ಬೆದರಿಕೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆ ,ಕಂದಾಯ ಇಲಾಖೆ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದರು ಸಹ ಯಾವುದೇ ಉತ್ತರವಿಲ್ಲದೆ ನ್ಯಾಯ ಕೊಡಿಸಲು ಮುಂದೆ ಬರದೆ ಅಧಿಕಾರಿಗಳು ಜಾಣ ಕುರುಡು ಹಾಗೂ ಕಿವುಡುತನ ಪ್ರದರ್ಶಿಸುತ್ತಿದ್ದಾರೆ.
ಸ್ಥಳಕ್ಕೆ ಉಪ ವಿಭಾಗಾಧಿಕಾರಿಗಳು ಅಥವಾ ಜಿಲ್ಲಾಧಿಕಾರಿಗಳು ಬರೋವರೆಗೂ ನಾವುಗಳು ಯಾವುದೇ ಕಾರಣಕ್ಕೂ ಆಹೋ ರಾತ್ರಿ ಧರಣಿ ನಿಲ್ಲಿಸುವುದಿಲ್ಲ ಇನ್ನೆರಡು ದಿನಗಳಲ್ಲಿ ಯಾವೊಬ್ಬ ಅಧಿಕಾರಿಯೂ ಪ್ರತಿಭಟನಾ ಸ್ಥಳಕ್ಕೆ ಬಾರದೆ ಇದ್ದರೆ ರೈತರಿಗೆ ನ್ಯಾಯ ದೊರಕಿಸಿಕೊಡದೆ ಇದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಕಚೇರಿ ಮುಂದೆ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಜೊತೆಗೆ ಒಂದು ವೇಳೆ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಯಾರೊಬ್ಬ ರೈತರಿಗೆ ಅನಾಹುತಗಳಾದರೆ ಅದಕ್ಕೆ ನೇರ ಹೊಣೆ, ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಎಂದು ಎಚ್ಚರಿಸಿದರು .
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.