Janataa24 NEWS DESK
Turuvekere: ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಎನ್ ವಿ ಶಶಿಕಲಾ ಹನುಮೇಗೌಡ ಆಯ್ಕೆ.

ತುರುವೇಕೆರೆ: ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು, 16 ಸದಸ್ಯ ಬಲವುಳ್ಳ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾದಂತ ಜಯಲಕ್ಷ್ಮಮ್ಮ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದು ಚುನಾವಣೆಗೆ ಎನ್ ವಿ ಶಶಿಕಲಾ, ನೂರಹಿಷ್, ಇಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಚುನಾವಣೆ ನಡೆದು ಎನ್ ವಿ ಶಶಿಕಲಾ ಹನುಮೇಗೌಡ ಅವರಿಗೆ 10 ಮತಗಳು,
ನೂರಾಹಿಷ್ ರವರಿಗೆ 06 ಮತಗಳು ಚಲಾವಣೆಯಾಗಿದ್ದು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸುರೇಶ್ ರವರು 10 ಮತಗಳ ಪಡೆದ ಎನ್ ವಿ ಶಶಿಕಲಾ ಹನುಮೇಗೌಡ ರವರನ್ನು ನೂತನ ಅಧ್ಯಕ್ಷರೆಂದು ಘೋಷಿಸಿದರು, ಇದೆ ವೇಳೆ ಎನ್ ವಿ ಶಶಿಕಲಾ ಹನುಮೇಗೌಡ ರವರ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು,
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕರ ವಸೂಲಿಗಾರ, ಸಿಬ್ಬಂದಿ ವರ್ಗ ಮತ್ತು ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಮಾಜಿ ಸದಸ್ಯರುಗಳು ಮಾಜಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.