Janataa24 NEWS DESK
Turuvekere: ಪ್ರಧಾನಿ ನರೇಂದ್ರ ಮೋದಿಯವರ 75 ನೆ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ.

ತುರುವೇಕೆರೆ: ತಾಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ಇರುವ ಜೆ ಎಸ್ ಫಾರಂ ಹೌಸ್ ನಲ್ಲಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಿ ನೂರಾರು ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸುವ ಮೂಲಕ ಪ್ರಧಾನಿಯವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಲಾಯಿತು
ಮಾಜಿ ಶಾಸಕ ಮಸಾಲಾ ಜಯರಾಮ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನಲೆ ಬಿಜೆಪಿ ವತಿಯಿಂದ ಇಡೀ ದೇಶಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನಧನ್ ಯೋಜನೆ, ಕೃಷಿ ಸಮ್ಮಾನ್, ಉಜ್ವಲ ಯೋಜನೆ ಸೇರಿದಂತೆ ಇನ್ನಿತರೆ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ದೇಶದ ಜನತೆಗೆ ಉತ್ತಮ ಆಡಳಿತವನ್ನು ನೀಡಿದ್ದಾರೆ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ, ದೂರ ದೃಷ್ಟಿ ಶ್ರೇಷ್ಠ ಆಡಳಿತದ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿರುವ ಮೋದಿಯವರು ದೇಶದ 144 ಕೋಟಿ ಜನರ ಕನಸು ನನಸು ಮಾಡಿ ನೆಮ್ಮದಿಯಿಂದ ಬದುಕಲು ಕಾರಣರಾಗಿದ್ದಾರೆ ಮುಂದಿನ ದಿನಗಳಲ್ಲಿ ಭಾರತವನ್ನು ವಿಶ್ವದ ನಂಬರ್ ಒಂದು ದೇಶವಾಗಿ ನಿರ್ಮಾಣ ಮಾಡುವ ಮೋದಿಜಿಯವರ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು.
ಜಗತ್ತಿನಲ್ಲಿ ಭಾರತವನ್ನು ನಾಲ್ಕನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಈ ಕೀರ್ತಿ ಮೋದಿಯವರಿಗೆ ಸಲ್ಲಬೇಕು ಅವರ ಚಿಂತನೆಗಳನ್ನು ಅನುಸರಿಸಿ ದೇಶವನ್ನು ಸುಭದ್ರ ಅಭಿವೃದ್ಧಿ ರಾಷ್ಟ್ರವನ್ನಾಗಿ ರೂಪಿಸಲು ಸಹಕರಿಸಬೇಕು ರಾಜ್ಯದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿವೆ ಕೇಂದ್ರ ಸರ್ಕಾರ ಟ್ಯಾಕ್ಸ್ ಗಳನ್ನು ಕಡಿಮೆ ಮಾಡಿದರೆ ಇವರು ಎಲ್ಲದಕ್ಕೂ ಟ್ಯಾಕ್ಸ್ ಹಾಕಿ ಜನರ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿದ್ದಾರೆ ಜೊತೆಗೆ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ಕಾರುಬಾರು ಇವುಗಳನ್ನು ಮುಚ್ಚಲು ಸಹ ಸರ್ಕಾರದಲ್ಲಿ ಹಣವಿಲ್ಲ,
ಆದರೆ ನಮ್ಮ ಪ್ರಧಾನಿಯವರು ಕೋವಿಡ್ ಸಮಯದಲ್ಲಿ ಹೆಚ್ಚಿನ ಜಾವಬ್ದಾರಿಯನ್ನು ಹೊತ್ತು ದೇಶದ ಜನರಿಗೆ ಸೋಂಕು ತಗುಲದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿದ್ದು, ಇದುವರೆಗೂ 140 ಕೋಟಿಗೂ ಹೆಚ್ಚು ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡಿರುವುದು ಇವರ ಆಡಳಿತದ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿ. ಆಗಾಗಿ ದೇಶಕ್ಕೆ ಮಾತ್ರ ಪ್ರಧಾನಿಯಲ್ಲ ಇಡೀ ವಿಶ್ವಕ್ಕೆ ನಾಯಕರು ಎಂದು ತಿಳಿಸಿದರು.
ಇದೇ ವೇಳೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂಡಿ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಅನಿತಾ ನಂಜುಂಡಯ್ಯ ಹಾಗೂ ಕೊಂಡಜ್ಜಿ ವಿಶ್ವನಾಥ್, ಮಂಡಲದ ಅಧ್ಯಕ್ಷರಾದ ಮೃತ್ಯುಂಜಯ, ಮುಖಂಡರಾದ ಅರಳಿಕೆರೆ ಶಿವಯ್ಯ, ಬೆಟ್ಟಸ್ವಾಮಿ, ಉಗ್ರಯ್ಯ , ಸೋಮೇನಹಳ್ಳಿ ಜಗದೀಶ್, ಪ್ರಸಾದ್, ವಿ ಬಿ ಸುರೇಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಿದಾನಂದ್, ಹಾಲೆಗೌಡ, ವಿ ಟಿ ವೆಂಕಟರಾಮು,ಸೇರಿದಂತೆ ಪಕ್ಷದ ಘಟಕಗಳ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಇನ್ನಿತರರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.