Janataa24 NEWS DESK
SSLC: ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರು ಅಮಾನತು

ಯಾದಗಿರಿ: ಹತ್ತನೇ ತರಗತಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ವಿಡಿಯೋ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಸೂಪರ್ವೈಸರ್ ಗಳನ್ನು ಸಸ್ಪೆಂಡ್ ಮಾಡಲಾಗಿದೆ.
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಸೂಪರ್ವೈಸರ್(Supervisor) ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ. ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಯಾವುದೇ ಕ್ರಮ ತಗೆದುಕೊಂಡಿರಲಿಲ್ಲ ಹಾಗೂ ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ಕರ್ತವ್ಯ ಲೋಪ ಎಸಗಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ಅಮಾನತ್ತು(Suspend) ಮಾಡಲಾಗಿದೆ.
ಇವತ್ತು ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭಗೊಂಡಿವೆ ಹಿನ್ನಲೆ ಇಂದು ಪ್ರಥಮ ಭಾಷೆ ಪರೀಕ್ಷೆ ಮುಗಿದಿದೆ. ಈ ವೇಳೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಡಿಡಿಪಿಐ ಎಚ್ಎನ್ ನಾಗೂರ ಪ್ರತಿಕ್ರಿಯಿಸಿದ್ದು, ಜಿಲ್ಲೆಯ 127 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಒಟ್ಟು 41,749 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಇದರಲ್ಲಿ 39,992 ವಿದ್ಯಾರ್ಥಿಗಳು ಹಾಜರಾಗಿದ್ದರು. 841 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಳಿದಂತೆ ಸುಗಮವಾಗಿ ಪರೀಕ್ಷೆ ನಡೆಸಿದ್ದೇವೆ ಎಂದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://www.janataa24.com/ipl2024-hitman-vs-pandya-mumbai-indians-fielding/
Subscribe YouTube
https://youtube.com/@janataa24?si=XsFcych2GMH0O6Gv
Nelamangala: ಮಹಿಳೆಯ ರಕ್ಷಣೆಗೆ ಬಂದ ಪೋಲಿಸರ ಮೇಲೆ ಹಲ್ಲೆ ಪೋಲಿಸರ ಅಥಿತಿಯಾದ ಪತಿ .