Document

ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ನೇಣಿಗೆ ಶರಣು

ಬೆಳಗಾವಿ: ರವಿ ಬಿ ಕಾಂಬಳೆ

ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿ ಎಎಸ್‌ಐ ರಾಮಲಿಂಗ ನಾಯಕ್ (49) ಎಂದು ತಿಳಿದು ಬಂದಿದೆ.
ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಬೈಕ್‌ ನಿಲ್ಲಿಸಿ ಶೆಡ್‌ಗೆ ಹೊಂದಿಕೊಂಡಿರುವ ಕಂಬಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

WhatsApp Image 2022 12 30 at 1.30.56 PM

ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಹಾರೂಗೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Document

Leave a Reply

Your email address will not be published. Required fields are marked *