ಮಧುಗಿರಿ: ಅಬಿದ್
ಮಧುಗಿರಿ: ಮಾದಿಗ ನೌಕರರ ಸೇಮಾಭಿವೃದ್ಧಿ ಸಂಘದ ವತಿಯಿಂದ ಮಾದಿಗ ಸಮುದಾಯದ 2021 22 ನೇ ಸಾಲಿನಲ್ಲಿ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಡಿಪ್ಲೋಮಾ ಐಟಿಐ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕೆಲ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಮಾಲಿಮರಿಯಪ್ಪ ರಂಗಮಂದಿರದಲ್ಲಿ ದಿನಾಂಕ 13.11.2022 ರಂದು ಆಯೋಜಿಸಲಾಗಿದೆ ಎಂದು ಎನ್ ಗೋಪಾಲಯ್ಯ ಸರ್ಕಾರದ ಅಪಾರ ಕಾರ್ಯದರ್ಶಿ ಕಾಡುಗೊಂಡನಹಳ್ಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾದಿಗ ನೌಕರರ ಸೇಮಾಭಿವೃದ್ಧಿ ಸಂಘದ ವತಿಯಿಂದ ಮಾದಿಗ ಸಮುದಾಯದ 2021 22 ನೇ ಸಾಲಿನಲ್ಲಿ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಡಿಪ್ಲೋಮಾ ಐಟಿಐ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕೆಲ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಮಾಲಿಮರಿಯಪ್ಪ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ರಮವು ಬೆಳಗ್ಗೆ 9:30 ಸಮಯಕ್ಕೆ ಪ್ರಾರಂಭಗೊಳ್ಳಲಿದೆ ಆದ್ದರಿಂದ ಈ ಗ್ರಾನೆಕ್ರಮಕ್ಕೆ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ದಲಿತಪರ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗೂ ಜನಸಾಮಾನ್ಯರು ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷರಾದ ಬಿ ಜಿ ಹನುಮಂತರಾಯಪ್ಪ ಮಾತನಾಡಿ, ಮಾದಿಗ ಜನಾಂಗ ಕ್ಷೇಮ ಅಭಿವೃದ್ಧಿ ಸಂಘದಿಂದ ಈ ಕಾರ್ಯಕ್ರಮವು ಆಯೋಜಿಸಲಾಗಿದ್ದು, ವಿವಿಧ ಹಂತಗಳಲ್ಲಿ ವಿದ್ಯಾಭ್ಯಾಸ ಮಾಡುವಂತ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಡಿಪ್ಲೋಮಾ ಐಟಿಐ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಅತ್ಯುನ್ನತ ಶ್ರೇಣಿಗಳಿಸಿದ 120 ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಈ ಕಾರ್ಯಕ್ರಮ ಮೊದಲಿಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಾರಂಭಗೊಳ್ಳುತ್ತದೆ, ಎಲ್ಲಾ ಗಣ್ಯ ವ್ಯಕ್ತಿಗಳು ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ಎಲ್ಲಾ ನೌಕರರ ಬಂಧುಗಳು ಸಕಾಲಕ್ಕೆ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾಧ್ಯಮ ಮೂಲಕ ಮನವಿ ಮಾಡಿದರು.