Janataa24 NEWS DESK

ಬೆಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಇಂದು ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್(APL) ಬಿಪಿಎಲ್(BPL) ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಇದೇ ವೇಳೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತ ತಿಳಿಸಿದರು.