Document

ಕನ್ನಡ ರಾಜ್ಯೋತ್ಸವದ ಬಿತ್ತಿ ಪತ್ರ ಬಿಡುಗಡೆಗೊಳಿಸಿದ ಕರುನಾಡ ವಿಜಯ ಸೇನೆ.

Janataa24 NEWS DESK

IMG 20231109 WA0003



ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರುನಾಡು ವಿಜಯ ಸೇನೆ ತಾಲೂಕು ಅಧ್ಯಕ್ಷರಾದ ಸುರೇಶ್, ಅವರ ನೇತೃತ್ವದಲ್ಲಿ ಪತ್ರಿಕಾ ಮಾಧ್ಯಮ ಗೋಷ್ಠಿ ನಡೆಸಲಾಯಿತು.

IMG 20231109 WA0005



ಇದೇ ಸಂದರ್ಭದಲ್ಲಿ ತುರುವೇಕೆರೆ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾದ ದುಂಡ ಮಲ್ಲಿಕಾರ್ಜುನ್ ಅವರಿಂದ ಕನ್ನಡ ರಾಜ್ಯೋತ್ಸವದ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

IMG 20231109 WA0004



ಇದೇ ತಿಂಗಳು 27 ನೇ ತಾರೀಕು ತುರುವೇಕೆರೆ ಪಟ್ಟಣದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆ ವತಿಯಿಂದ ,ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದ್ದು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರುನಾಡು ವಿಜಯ ಸೇನೆ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿ ಕೊಳ್ಳಲಾಗಿದ್ದು ಇದರ ಜೊತೆಗೆ ಶಾಲಾ ಮಕ್ಕಳಿಂದ ನಾಡು ನುಡಿದಂತೆ ನೃತ್ಯ ಸ್ಪರ್ಧೆಯನ್ನು ಸಹ ನಡೆಸಲಾಗುವುದು ಎಂದು ತಾಲೂಕು ಅಧ್ಯಕ್ಷ ಸುರೇಶ್ ಅವರು ತಿಳಿಸಿದರು.

IMG 20231109 WA0002



ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧಪರ ಸಂಘಟನೆಗಳ ಪದಾಧಿಕಾರಿಗಳು ,ತಾಲೂಕಿನ ಸರ್ಕಾರಿ ಅಧಿಕಾರಿಗಳು, ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮವನ್ನು ಪಟ್ಟಣದ ಹೃದಯ ಭಾಗದಲ್ಲಿರುವ ಈರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು, ತಾಲೂಕಿನ ಎಲ್ಲಾ ಜನತೆಯನ್ನು ಈ ಕಾರ್ಯಕ್ರಮಕ್ಕೆ ಪತ್ರಿಕಾ ಮಾಧ್ಯಮದ ಮುಖೇನ ಆಹ್ವಾನಿಸಿದರು.



ಇದೇ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಲೋಕೇಶ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷರಾದ ಪುಟ್ಟರಾಜು ಬಿಗಿನೇಹಳ್ಳಿ, ಮುನಿಯಪ್ಪ, ತಮ್ಮಯ್ಯ,ಕಾರ್ಯದರ್ಶಿ ಗವಿ ರಂಗಪ್ಪ, ಜಂಟಿ ಕಾರ್ಯದರ್ಶಿ ಪರಮೇಶ್ವರ್ ಪಟೇಲ್, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷ ವಿನುತಾ, ಹಾಗೂ ತುರುವೇಕೆರೆ ತಾಲೂಕಿನ ಕರುನಾಡ ವಿಜಯ ಸೇನೆಯ ಎಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ

ತುರುವೇಕೆರೆ: ಮಂಜುನಾಥ್

Document

Leave a Reply

Your email address will not be published. Required fields are marked *