Document

ಕಾಂಗ್ರೆಸ್‍ಗೆ ಬಹುಮತ ಖಚಿತ : ಎಬಿಪಿ ಸಿ- ವೋಟರ್ ಸಮೀಕ್ಷೆ

Janataa24

NEWS DESK

ಕಾಂಗ್ರೆಸ್‌ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್

145d4f995d8f9741435f66b5767564e4

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

image 4
ಜಾಹೀರಾತು/Advertisement
Document

Leave a Reply

Your email address will not be published. Required fields are marked *