ತುರುವೇಕೆರೆ: ಮಂಜುನಾಥ್
ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ತೊರೆದು ನೂರಾರು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ಮತ್ತು ಜೆಡಿಎಸ್ ಮುಖಂಡ ಬಾಣಸಂದ್ರ ರಮೇಶ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ನೂರಾರು ಕಾರ್ಯಕರ್ತರು ಸೇರ್ಪಡೆಗೊಂಡರು.

ಇದೆ ವೇಳೆಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಬಾಣಸಂದ್ರ ರಮೇಶ್ ರವರು ನಮ್ಮ ಪಕ್ಷದ ಹಿರಿಯ ನಾಯಕರಾದ ಹಾಗೂ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿಯವರ ಅಭಿವೃದ್ಧಿ ಕೆಲಸ ನೋಡಿ ಯುವಕ ಮಿತ್ರರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು

ಮುಂಬರುವ ಚುನಾವಣೆಯಲ್ಲಿ ನಮ್ಮ ತಾಲೂಕಿನ ಮಾಜಿ ಶಾಸಕರಾದ ಎಂ ಟಿ ಕೃಷ್ಣಪ್ಪನವರನ್ನು 2023ರ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲಿಸಿಕೊಳ್ಳಲು ನಮ್ಮ ತಾಲೂಕಿನ ಜನರು,ಕಾರ್ಯಕರ್ತರು ಮತ್ತು ಮುಖಂಡರುಗಳ ಪಡೆ ಪಣತೊಟ್ಟು ಗೆದ್ದೇ ಗೆಲ್ಲಿಸುತ್ತೇವೆ ಎಂದು ದೃಢ ಸಂಕಲ್ಪ ಮಾಡಿದರು.
