Janataa24 NEWS DESK
ಪಾವಗಡ: ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಆಥಿರ್ಕವಾಗಿ ಚೇತರಿಸಿಕೊಳ್ಳಲು ಸಹಾಯಧನವನ್ನು ನೀಡುತ್ತಿರುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿಗೆ ತಾಲ್ಲೂಕಿನಲ್ಲಿ 51.971 ಫಲಾನುಭವಿಗಳು ಆಯ್ಕೆಯಾಗಿದ್ದಾರೆ ಎಂದು ತಹಶಿಲ್ದಾರ್ ವರದರಾಜ್ ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾವಗಡ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಒಟ್ಟು 60.1116 ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಪೈಕಿ 51.971 ಫಲಾನುಭವಿಗಳು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ.
ಆದರೆ ಕಾರಣಾಂತರಗಳಿಂದ 8.145 ಜನ ಮಹಿಳೆಯರು ಸಧ್ಯಕ್ಕೆ ಯೋಜನೆಯಿಂದ ಹೊರಗೆ ಉಳಿದ್ದು, ಶೀಘ್ರ ಅವರನ್ನು ಯೋಜನೆಯ ವ್ಯಾಪ್ತಿಗೆ ತರಲಾಗುವುದು.
ಪಾವಗಡ ನಗರ ಒಂದರಲ್ಲಿಯೇ 6377 ಫಲಾನುಭವಿಗಳನ್ನು ಗುರುತಿಸಲಾಗಿದೆ.
ಈ ಪೈಕಿ 5285 ಫಲಾನುಭವಿಗ
ಳು ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ. 1092 ಜನ ಇನ್ನು ಯೋಜನೆಯ ವ್ಯಾಪ್ತಿಗೆ ಬರಬೇಕಿದೆ. ಶೇ.77.23ರಷ್ಟು ಫಲಾನುಭವಿಗಳು ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದಾರೆ.

ಗ್ರಾಮೀಣ ಭಾಗದ 34 ಗ್ರಾಮ ಪಂಚಾಯಿತಿಗಳ ಒಟ್ಟು 53739 ಫಲಾನುಭವಿಗಳನ್ನು ಗುರುತಿಸಲಾಗಿದ್ದು, 46686 ಜನ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. 7053 ಮಹಿಳೆಯರು ಯೋಜನೆಯಿಂದ ಹೊರಗಿದ್ದು, ಶೇ.86.45 ರಷ್ಟು ಸಾಧನೆ ಮಾಡಲಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಅದೇ ರೀತಿಯಲ್ಲಿ ಪಾವಗಡ ಪಟ್ಟಣದ ಎಸ್.ಎಸ್.ಕೆ.ರಂಗಮಂದಿರದಲ್ಲಿ ಶಾಸಕ ಹೆಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ.ತಹಶೀಲ್ದಾರ್ ವರದರಾಜ್.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ನಾರಾಯಣ್. ತಾಲೂಕು ಪಂಚಾಯಿತಿ ಇಒ ಹಾಗೂ .ಪುರಸಭೆ ಸದಸ್ಯರು ನೇತೃತ್ವದಲ್ಲಿ ಕಾರ್ಯಕ್ರಮ ಚಾಲನೆ ನೀಡಲಿದ್ದಾರೆ.
ನಮ್ಮ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಾಲ್ಲೂಕು ಇಒ ಹೇಳಿದರು.
ಆಯ್ಕೆಯಾಗಿರುವ ಫಲಾನುಭವಿಗಳನ್ನು ಆಯಾ ಪಂಚಾಯಿತಿಯಲ್ಲಿ ಸೇರಿಸಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ವರದಿ
ಪಾವಗಡ:ಇಮ್ರಾನ್ ಉಲ್ಲಾ.