Document

ಚಡ್ಡಿ ಧರಿಸಿ ರೈಲಿನಲ್ಲಿ ಬಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ

Janataa24 NEWS DESK

76874388 7e5c 410e 8196

ಮಂಡ್ಯ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಶನಿವಾರ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಚಡ್ಡಿ ಟೀ ಶರ್ಚ್‌ ಧರಿಸಿ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುವ ಮೂಲಕ ಸರಳತೆ ಮೆರೆದಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಆಹ್ವಾನದ ಮೇರೆಗೆ ಶುಕ್ರವಾರ ರಾತ್ರಿ ಪಾಂಡವಪುರ ರೈಲು ನಿಲ್ದಾಣದಿಂದ ದರ್ಶನ್‌ ಪ್ರಯಾಣ ಬೆಳೆಸಿದ್ದಾರೆ.

ಇಂದು(ಶನಿವಾರ) ಬೆಂಗಳೂರಿನಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಲಿದ್ದಾರೆ

Document

Leave a Reply

Your email address will not be published. Required fields are marked *