Janataa24 NEWS DESK
ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತು ಹಾಕಿರುವ ವಿರುದ್ಧ ಗುಡುಗಿದ ಡಿ ಎಸ್ ಎಸ್ ಸಂಚಾಲಕ ದಂಡಿನಶಿವರ ಕುಮಾರ್.

ತುರುವೇಕೆರೆ: ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತುಹಾಕಿರುವುದು ಭಾರತೀಯ ಜನತಾ ಪಕ್ಷದ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿ. ಇದು ಅತ್ಯಂತ ಖಂಡನೀಯ ,
1949ರ ಸಂವಿಧಾನದ ಪ್ರತಿಯನ್ನೇ ನೀಡಲಾಗಿದೆ ಎನ್ನುವುದು ತಮ್ಮೊಳಗಿನ ದುಷ್ಟ ಆಲೋಚನೆಯನ್ನು ಮುಚ್ಚಿಕೊಳ್ಳುವ ಪ್ರಯತ್ನವಾಗಿದೆ. ತಿದ್ದುಪಡಿಯಾದ ನಂತರ ಪರಿಷ್ಕೃತ ಪ್ರತಿಯನ್ನು ನೀಡಬೇಕಾಗಿರುವುದು ನ್ಯಾಯವೂ ಹೌದು, ಧರ್ಮವೂ ಹೌದು.
1976ರಲ್ಲಿಯೇ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡಿ ‘’ಸಮಾಜವಾದಿ’’ ಮತ್ತು “ಜಾತ್ಯತೀತ” ಎಂಬ ಪದಗಳನ್ನು ಸೇರಿಸಲಾಗಿತ್ತು. ಈ ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ ಎಂದು ತುರುವೇಕೆರೆ ತಾಲೂಕು ಡಿಎಸ್ಎಸ್ ಸಂಚಾಲಕ ದಂಡಿನ ಶಿವರ ಕುಮಾರ್ ಖಂಡಿಸಿದ್ದಾರೆ, ಮುಂದುವರೆದ ಮಾತನಾಡಿದ ಅವರು,
ಸಂವಿಧಾನದ ಬಗ್ಗೆ ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್ ಗೆ ಇರುವ ವಿರೋಧಕ್ಕೆ ಇತಿಹಾಸ ಸಾಕ್ಷಿ. ಸಂವಿಧಾನವನ್ನು ದೇಶ ಒಪ್ಪಿಕೊಂಡ ಕಾಲದಲ್ಲಿಯೇ ಆರ್.ಎಸ್.ಎಸ್ ಅದನ್ನು ವಿರೋಧಿಸಿತ್ತು. ಈ ಸಂವಿಧಾನದಲ್ಲಿ ಭಾರತೀಯತೆ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದನ್ನು ಮರೆಯಲಾಗದು.
ಅಟಲ್ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನದ ಪುನರ್ ಪರಿಶೀಲನೆಗೊಳಪಡಿಸುವ ವಿಫಲ ಪ್ರಯತ್ನ ನಡೆದಿರುವುದನ್ನು ದೇಶದ ಜನತೆ ಮರೆತಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರದ ಕಾಲದಲ್ಲಿ ಬಿಜೆಪಿ ನಾಯಕರು ಮತ್ತು ಸಂಸದರು ನಿರಂತರವಾಗಿ ಸಂವಿಧಾನದ ಮೇಲೆ ದಾಳಿ ನಡೆಸಿದ್ದಕ್ಕೆ ದೇಶ ಸಾಕ್ಷಿಯಾಗಿದೆ ಎಂದರು.
ವರದಿ
ತರುವೇಕೆರೆ: ಮಂಜುನಾಥ್