ಜೈಲಿಗೆ ಹಾಕೋದು, ಗಡೀಪಾರು ಮಾಡೋದು ಅತಿರೇಕ; ಚೇತನ್ ಬಂಧನ, ವೀಸಾ ರದ್ದು ವಿರುದ್ಧ ನಟ ಕಿಶೋರ್ ಗರಂ

Janataa24 NEWS DESK

ಬೆಂಗಳೂರು

images2872928329

ಸಾಮಾಜಿಕ ಹೋರಾಟಗಾರ, ನಟ ಚೇತನ್ (Chetan Ahimsa) ಅವರ ವೀಸಾ ರದ್ದು (visa cancellation) ಮಾಡಿರುವ ಸರ್ಕಾರದ ನಡೆಯನ್ನು ವಿಭಿನ್ನವಾಗಿ ಪ್ರಶ್ನಿಸಿದ್ದಾರೆ ನಟ ಕಿಶೋರ್‌. ಇದುಸರಕಾರದ ಅತಿರೇಕದ ನಡೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಶೋರ್‌ (Kishor) ಬರೆದುಕೊಂಡಿದ್ದಾರೆ. ಅಲ್ಲದೇ, ಹಿಂದುತ್ವವವನ್ನು ಗುತ್ತಿಗೆ ಪಡೆದವರ ವಿರುದ್ಧವೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದಿರುವ ಕಿಶೋರ್, ‘ಹಿಂದುತ್ವ (Hindutva) ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ’ ಎಂದಿದ್ದಾರೆ.

ಮುಂದುವರೆದು, “ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿದೆಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ” ಎಂದು ಪ್ರಶ್ನೆ ಮಾಡಿದ್ದಾರೆ.

“ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು” ಎಂದು ಬರೆದಿದ್ದಾರೆ ಕಿಶೋರ್.

Leave a Reply

Your email address will not be published. Required fields are marked *