Janataa24 NEWS DESK
ಅಶೋಕ್ ಲೈಲ್ಯಾಂಡ್ ಟೆಂಪೋ ಹಾಗೂ ಲಾರಿ ನಡುವೆ ಡಿಕ್ಕಿ.
ಮಧುಗಿರಿ: ತಾಲೂಕಿನ ಪುರವರ ಹೋಬಳಿಯ ದೊಡ್ಡ ಹೊಸಹಳ್ಳಿಯಲ್ಲಿ ಅಶೋಕ್ ಲೈಲ್ಯಾಂಡ್ ಟೆಂಪೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ.

ಅಪಘಾತದಲ್ಲಿ ಗಾಯಗೊಂಡ ವಾಹನ ಸವಾರರನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ, ಅಶೋಕ್ ಲೈಲ್ಯಾಂಡ್ ಚಾಲಕ ಸೊಂಟ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚುವರಿ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು.

ಸುಮಾರು 30 ನಿಮಿಷಗಳ ನಂತರ ತಡವಾಗಿ ಸ್ಥಳಕ್ಕೆ ಬಂದ ಆಂಬುಲೆನ್ಸ್.
ಸರಿಯಾದ ಸಮಯಕ್ಕೆ ಆಂಬುಲೆನ್ಸ್ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರ ಆಕ್ರೋಶ.
ತುಂಬಾ ಸಮಯದ ನಂತರ ಸ್ಥಳಕ್ಕೆ ಆಂಬುಲೆನ್ಸ್.
ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳು ಬೇಟಿ

ಟ್ರಾಫಿಕ್ ಜಾಮ್ ಆಗಿದ್ದ ರಸ್ತೆಯನ್ನು ಕ್ಲಿಯರ್ ಮಾಡಿಸಿದ ಆರಕ್ಷಕ ಠಾಣೆಯ ಸಿಬ್ಬಂದಿಗಳು ಈ ಘಟನೆಗೆ ಸಂಬಂಧಿಸಿ ಕೊಡುಗೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ
ಮಧುಗಿರಿ:ಅಬಿದ್