Janataa24 NEWS DESK

ಕೊಡಗು: ನಟ ಅಭಿಷೇಕ್-ಅವಿವಾ (Aviva) ಜೋಡಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಅಭಿಷೇಕ್ ದಂಪತಿ ಭೇಟಿ ನೀಡಿದ್ದಾರೆ. ಈ ಕುರಿತು ನಟಿ, ಸಂಸದೆ ಸುಮಲತಾ (Sumalatha) ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

ಕಾವೇರಿ ಉಗಮ ಸ್ಥಾನ ತಲಕಾವೇರಿ (Tala Cauvery) ಅಭಿಷೇಕ್-ಅವಿವಾ ದಂಪತಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ಬಗೆಹರಿಯಲೆಂದು ಪ್ರಾರ್ಥಿಸಿದರು ಎಂದು ಸುಮಲತಾ ಬರೆದುಕೊಂಡಿದ್ದಾರೆ. ಅಭಿಷೇಕ್ ದಂಪತಿ ವಿಶೇಷ ಪೂಜೆ ಸಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಭಿಷೇಕ್ ಹೆಗಲ ಮೇಲೆ ಹಸಿರು ಟಾವೆಲ್ ಹಾಕಿ ಪೂಜೆ ಸಲ್ಲಿಸಿದ್ದಾರೆ. ಅವಿವಾ ಕೆಂಪು ಬಣ್ಣ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪೂಜೆಯಲ್ಲಿ ಅವಿವಾ ಭಾಗಿಯಾಗಿರುವ ರೀತಿ ನೋಡಿ ಅಂಬಿ ಕುಟುಂಬಕ್ಕೆ ಸರಿಯಾದ ಸೊಸೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.