ತಾಯಿ-ಮಗು ಆಸ್ಪತ್ರೆ ನಿರ್ಮಾಣ ಮಾಡ್ತೀವಿ: ಡಿಕೆಶಿ ಗ್ಯಾರಂಟಿ

Janataa24 NEWS DESK

KShivakumar

ಬೆಂಗಳೂರು: ಈಗಾಗಲೇ ಮನೆಯೊಡತಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ (Congress) ಪಕ್ಷದ ಪರವಾಗಿ ಕೊನೆಯ ದಿನದ ಚುನಾವಣಾ ಪ್ರಚಾರದ ವೇಳೆ ಡಿಕೆ ಶಿವಕುಮಾರ್ ಮತ್ತೊಂದು ಗ್ಯಾರಂಟಿಯನ್ನ ಘೋಷಿಸಿದೆ

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ (DK Shivakumar) ಅವರು, ಈ ರಾಜ್ಯಕ್ಕೆ ಒಳ್ಳೆಯ ಸರ್ಕಾರ ಕೊಡ್ತೀವಿ. ರೈತರಿಗಾಗಿ ಎಷ್ಟು ಸಾಧ್ಯವೋ ಅಷ್ಟೂ ಕೆರೆಗಳನ್ನ ತುಂಬಿಸುತ್ತೇವೆ. ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಎಲ್ಲರನ್ನೂ ಸಮಾನತೆಯಿಂದ ನೋಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರೋದು ತಪ್ಪಿಸುತ್ತೇವೆ ಎಂದು ಹೇಳಿದ್ದಾರೆ.

`ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ಡೋಂಟ್ ತ್ರೆಟನ್ ಅಸ್, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ. ನಿಮ್ಮ ಶಾಸಕರು ಸಂಸದರು ಮಕ್ಕಳ ತರಹ ಸುಮ್ಮನಿರಬಹುದು. ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ. ನಿಮ್ಮ ಪ್ರಧಾನಿಯನ್ನ ಬೀದಿ ಬೀದಿ ಅಲೆಯೋ ತರಹ ಮಾಡಿರೋದು ನೀವು ಎಂದು ತಿರುಗೇಟು ನೀಡಿದ್ದಾರೆ.

ನಾವು 141 ಸೀಟ್ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. 15ನೇ ತಾರೀಕು ಕಾಂಗ್ರೆಸ್ ಸರ್ಕಾರ ತಂದು ನಾವು ಘೋಷಣೆ ಮಾಡಿರುವ ಗ್ಯಾರಂಟಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *