Janataa24 NEWS DESK
ಸರ್ಕಾರದ ಮಹತ್ವಕಾಂಕ್ಷೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ .
ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಯ ಆವರಣದಲ್ಲಿ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ,ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾಲೂಕು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ, ಮೋಹನ್ ಕುಮಾರ್, ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಂಜುನಾಥ್ (ತೂಬಿನ ಕಟ್ಟೆ) ,ಹಿರಿಯ ಸದಸ್ಯರಾದ ಗೋವಿಂದಪ್ಪ, ಇವರುಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ವೇಳೆ ನೂರಾರು ಮಹಿಳೆಯರು ಗೃಹಲಕ್ಷ್ಮಿ ಯೋಜನಾ ಅನುಷ್ಠಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇನ್ನು ಈ ಕಾರ್ಯಕ್ರಮವನ್ನು ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶಿವರಾಜ್, ಗ್ರಂಥಾಲಯ ಮೇಲ್ವಿಚಾರಕರಾದ ಪ್ರೇಮ ಕುಮಾರ ,ಇವರ ಮೇಲ್ವಿಚಾರಣೆಯಲ್ಲಿ ಆಯೋಜನೆ ಮಾಡಲಾಗಿದ್ದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಹಿಳೆಯರಿಗೆ ಊಟದ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿತ್ತು

ಇದೇ ಸಂದರ್ಭದಲ್ಲಿ, ಸೊರವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು, ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಅಂಗನವಾಡಿ ಸಿಬ್ಬಂದಿ ,ಆಶಾ ಕಾರ್ಯಕರ್ತೆಯರು ,ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ
ತುರುವೇಕೆರೆ: ಮಂಜುನಾಥ್