Janataa24 NEWS DESK
ದೇವರ ಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಜಾಗೃತಿ.

ಪಾವಗಡ : ಸಿಕೆಪುರ ವಲಯದ ದೇವರಬೆಟ್ಟ ಸರ್ಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.
ಈ ಸಂದರ್ಭ ಶಾಲೆಯ ಶಿಕ್ಷಕರು ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು. ಮೇಲ್ವಿಚಾರಕರಾದ ಮನು ರವರು ಮಾತನಾಡುತ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅನೇಕ ಶಾಲಾ ಕಾಲೇಜು ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಜಾಗೃತಿ ಮಾಡುವಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಹಾಗೂ ಸಸಿ ನೆಡುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪರಿಸರ ಸಂರಕ್ಷಣೆ ಯುವ ಜನರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಶಾಲೆಯ ಆವರಣದಲ್ಲಿ 20 ಸಸಿಗಳನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಶಬ್ಬೀರ್ ಅಹ್ಮದ್ ರವರು ಮಂಜಮ್ಮ ರವರು ಹಾಗೂ ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಶಾಲೆಯ ಮಕ್ಕಳು ಭಾಗವಹಿಸಿದ್ದರು.
ವರದಿ: ಇಮ್ರಾನ್ ಉಲ್ಲಾ.ಪಾವಗಡ