ನಟ ಅಶೋಕ್ ಕುಮಾರ್ ರವರ ಇಬ್ಬರು ಹೆಣ್ಣು ಮಕ್ಕಳು ದಾಂಪತ್ಯ ಜೀವನಕ್ಕೆ ಗುಡ್-ಬೈ ಹೇಳಿ ನಿತ್ಯಾನಂದನ ಆಶ್ರಮ ಸೇರಿದ್ದೇಕೆ

Janataa24 NEWS DESK

n5030667001685003469057f68e849e337a4b2d78ba677ee20513299ae6e1c4630d8d06e4ff184bff6aa271

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರ ಇಬ್ಬರು ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ವಾಸಿಸುತ್ತಿದ್ದಾರೆ ಎಂದು ಶಾಕಿಂಗ್ ಹೇಳಿಕೆಯೊಂದನ್ನ ಬಿಚ್ಚಿಟ್ಟಿದ್ದಾರೆ. ಭಾವುಕರಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ತೆರೆದಿಟ್ಟಿದ್ದಾರೆ.

ಪುಟ್ಟಣ್ಣ ಕಣಗಾಲ್ ಅವರ ಆಪ್ತರಾಗಿದ್ದ ಅಶೋಕ್ ಕುಮಾರ್ ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ, ಪೋಷಕನಟ, ವಿಲನ್ ಆಗಿ ಖ್ಯಾತಿ ಘಳಿಸಿದ್ದ ಅಶೋಕ್ ಕುಮಾರ್ ಅವಕಾಶ ಸಿಗದೇ ಇರೋ ಕಾರಣ ಚಿತ್ರರಂಗದಿಂದ ದೂರ ಸರಿದ್ದರು. ಇದೀಗ ಅಶೋಕ್ ಅವರು, ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ.

85 ವರ್ಷ ವಯಸ್ಸಿನ ಅಶೋಕ್ ಕುಮಾರ್, ವಧು ನೋಡದೇ ಮದುವೆಯಾಗಿದ್ರಂತೆ. ಆಕೆ ಇಷ್ಟವಿಲ್ಲದೇ ಕುಟುಂಬದವರ ಮಾತಿಗೆ ಕಟ್ಟುಬಿದ್ದು ಮದುವೆಯಾದೆ. ನಮಗೆ ಮೂರು ಜನ ಹೆಣ್ಣು ಮಕ್ಕಳು, ಅವರು ಇಷ್ಟಪಟ್ಟರ ಜೊತೆ ಮದುವೆ ಮಾಡಿಸಿಕೊಟ್ಟೆ, ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದಾಳೆ. ಅವಳು ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು. ಅಕ್ಕನನ್ನು ನೋಡಲು ನನ್ನ 2ನೇ ಮಗಳು ರಂಜಿತಾ ಹೋಗಲು ಆರಂಭಿಸಿದ್ದಳು.

ನಿತ್ಯಾನಂದ ಸ್ವಾಮಿ ಜೊತೆ ನನ್ನ ಮಗಳು ರಂಜಿತಾ ಇದ್ದಾಳೆ ಅಂತಾ ಜನ ಹೇಳ್ತಾರೆ. ರಂಜಿತಾ- ನಿತ್ಯಾನಂದು ನಡುವಿನ ರಿಲೇಷನ್‌ಶಿಪ್ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಆ ಫೋಟೋಗಳನ್ನ ನೋಡಿದರೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಇಬ್ಬರು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದಾರೆ. ಇವತ್ತಿಗೂ ಅವರು ಅಲ್ಲೇ ಇದ್ದಾರೆ ಎಂದು ನಟ ಅಶೋಕ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದಿಗೂ ನನ್ನ ಇಬ್ಬರೂ ಮಕ್ಕಳು ಕರೆ ಮಾಡಲಿಲ್ಲ. ನಮ್ಮ 3ನೇ ಮಗಳು ನನ್ನನ್ನೂ ನೋಡಿಕೊಳ್ತಿದ್ದಾಳೆ. ಇಬ್ಬರು ಮಕ್ಕಳು ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರು ಎಂದು ಅಶೋಕ್ ಕುಮಾರ್ ಭಾವುಕರಾಗಿದ್ದಾರೆ.

Source: ANI

Leave a Reply

Your email address will not be published. Required fields are marked *