ಪಾವಗಡ ವಿವಿಧ ಇಲಾಖೆಗಳಲ್ಲಿ ಮತದಾನ ದಿನಾಚರಣೆ ಪ್ರತಿಜ್ಞಾವಿಧಿ ಸ್ವೀಕಾರ

ಪಾವಗಡ: ಇಮ್ರಾನ್ ಉಲ್ಲಾ

ಪಾವಗಡ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ದಿನಾಚರಣೆ ಕಾರ್ಯಕ್ರಮದ ನಂತರ ತಹಶೀಲ್ದಾರ್ ವರದರಾಜ್ ಸಿಬ್ಬಂದಿಗಳೂಂದಿಗೆ ಪ್ರತಿಜ್ಞೆ ವಿಧಿ ಸ್ವೀಕರಿಸಿದರು.

WhatsApp Image 2023 01 25 at 7.23.59 PM

ಮತದಾರ ಸಾಕ್ಷರತಾ ಕ್ಲಬ್ ಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರ ವಿಚಾರವಾಗಿ ಚರ್ಚಾ ಸ್ಪರ್ಧೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು, ವಿಜೇತ ಮಕ್ಕಳಿಗೆ ತಹಶೀಲ್ದಾರ್ ವರದರಾಜ್ ರವರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶ್ವಥ್ ನಾರಾಯಣ, ಪಿಇಓ ಚಿದಾನಂದ, ಶಿರಸ್ತಿದಾರ್ ನರಸಿಂಹಮೂರ್ತಿ. ಗ್ರೇಡ್ ತಹಶೀಲ್ದಾರ್ ಸುಮತಿ, ಕಂದಾಯ ನಿರೀಕ್ಷಕರು ರಾಜಗೋಪಾಲ್ ಇದ್ದರು.

ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಮತದಾರರ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯರವರು, ಸಹಾಯಕ ನಿರ್ದೇಶಕರಾದ ರಂಗನಾಥ್ ರವರು, ತಾಲ್ಲೂಕು ಯೋಜನಾಧಿಕಾರಿ ಮಲ್ಲಿಕಾರ್ಜುನ ರವರು ಹಾಗೂ ಎಲ್ಲಾ ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪಾವಗಡ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ದಿನಾಚರಣೆಯ ಹಿನ್ನೆಲೆ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಅವರು ಮತದಾನದ ಮಹತ್ವ ಮತದಾನದಲ್ಲಿ ಯುವಕರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ಉಪನ್ಯಾಸಕ ಅಶ್ವತ್ ಅವರು ವಿದ್ಯಾರ್ಥಿಗಳಿಗೆ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಕಾಲೇಜಿನ ಪ್ರಾಧ್ಯಾಪಕರಾದ, ಪ್ರೊಫೆಸರ್ ಲಿಂಗರಾಜು, ಶಶಿಕಿರಣ್, ಮಂಜುನಾಥ್, ಸುರೇಶ್ ಯಾದವ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *