Document

ಬಿಸಿಲಿನ ತಾಪ ಹೆಚ್ಚಾಗಿದೆ, ನರೇಗಾ ಯೋಜನೆಯ ಕೂಲಿ ಕಾರ್ಮಿಕರು ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳುಬೇಕು: PDO ಅಶೋಕ್

Janataa24 NEWS DESK

ಗುಬ್ಬಿ: ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳುಬೇಕೆಂದು ಬಿದರೆ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಅಶೋಕ್ ಬಸವನಾಳ್ ತಿಳಿಸಿದರು.

IMG 20230601 WA0001



ಗುಬ್ಬಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಈ ಯೋಜನೆಯ ಅಡಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಗ್ರಾಮ ಆರೋಗ್ಯ ಅಮೃತ ಅಭಿಯಾನ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಇದರ ಸದ್ಬಳಕೆಯನ್ನು ಎಲ್ಲಾ ನರೇಗಾ ಕೂಲಿ ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.


ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ಮಾತನಾಡಿ ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೂಲಿ ಮೊತ್ತ 309 ರೂಗಳಿಂದ 316 ರೂಗಳಿಗೆ ಹೆಚ್ಚಳವಾಗಿದ್ದು ಇದರ ಸದ್ಬಳಕೆಯನ್ನು ಮಾಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕು IEC. ಸಂಯೋಜಕರಾದ ರಾಘವೇಂದ್ರಹಾಗೂ ಪಂಚಾಯತಿ ಉಪಾಧ್ಯಕ್ಷ ಯತೀಶ್. ಸದಸ್ಯರಾದ ರಮೇಶ್. ಹಾಗೂ ಆಶಾ ಕಾರ್ಯಕರ್ತರು. ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು

ವರದಿ ಗುಬ್ಬಿ: ಶ್ರೀಕಾಂತ್

Document

Leave a Reply

Your email address will not be published. Required fields are marked *