ಬೆಂಗಳೂರು: ಬೆಂಗಳೂರು ನಗರದ ಹಲವು ಶಾಲಾ ಮಕ್ಕಳ ಬ್ಯಾಗ್ ಗಳಲಿ ಕಾಂಡೊಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿದೆ. ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದು ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಮೊಬೈಲ್ ಪರಿಶೀಲನೆಯ ವೇಳೆ ಶಿಕ್ಷಕರಿಗೆ ದಂಗುಬಡಿಸುವಂತಹ ಸತ್ಯಗಳು ಬಯಲಾಗಿವೆ.

9 ಮತ್ತು 10ನೇ ತರಗತಿ ವಿದ್ಯಾರ್ಥಿ- ವಿದ್ಯಾರ್ಥಿನಿಯರ ಬ್ಯಾಗ್ ಗಳಲ್ಲಿ ಕಾಂಡೊಮ್, ಗರ್ಭ ನಿರೋಧಕ ಮಾತ್ರೆಗಳು ಜೊತೆ ಜೊತೆಗೆ ಸಿಗರೇಟ್, ಲೈಟರ್, ಫೆವಿಕಾಲ್ ಮತ್ತು ಸಲ್ಯೂಷನ್ ನಂತಹ ಅಪಾಯಕಾರಿ ವಸ್ತುಗಳು ಮಕ್ಕಳ ಬ್ಯಾಗ್ ಗಳಲ್ಲಿ ಪತ್ತೆಯಾಗಿವೆ.
ಕರ್ಣ ಸಮಯದಲ್ಲಿ ಆನ್ಲೈನ್ ಶಿಕ್ಷಣದ ಬಳಿಕ ವಿದ್ಯಾರ್ಥಿಗಳಿಗೆ ಮೊಬೈಲ್ ಗಳು ಹೆಚ್ಚಾಗಿದ್ದು, ತರಗತಿಗಳಿಗೆ ಮೊಬೈಲ್ ತಂದು ಬಳಸುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಎಎಂಎಸ್ ಸಹಯೋಗದೊಂದಿಗೆ ಅಧ್ಯಾಪಕರು ಬೆಂಗಳೂರಿನ ಅನೇಕ ಶಾಲೆಗಳಲ್ಲಿ ಮಕ್ಕಳ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಪ್ರಾಪ್ತ ಮಕ್ಕಳ ಬ್ಯಾಗ್ ನಲ್ಲಿ ಊಹಿಸಲಾರದ ವಸ್ತುಗಳು ಕಂಡುಬಂದಿದೆ.
ಕೋವಿಡ್ ನಂತರದ ದಿನಗಳಲ್ಲಿ ಮಕ್ಕಳ ನಡವಳಿಕೆಯಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದ ಹಿನ್ನೆಲೆ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಲಾಗಿತ್ತು. ಶಾಲೆಯಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮೊಬೈಲ್ ತರುತ್ತಿದ್ದರು. ಈ ಬಗ್ಗೆ ತೀವ್ರ ತಪಾಸಣೆಗೆ ಹೇಳಿದಾಗ ಶಿಕ್ಷಕರೇ ದಂಗು ಬಡಿದು ಹೋಗಿದ್ದಾರೆ ಯಾಕೆಂದರೆ ಸಿಕ್ಕಿದ್ದು ಮೊಬೈಲ್ ಅಲ್ಲ ಕಾಂಡೊಮ್ ಮತ್ತು ಗರ್ಭನಿರೋಧಕ ಮಾತ್ರೆಗಳು. ಮುಂದಿನ ಪೀಳಿಗೆ ಸಂಪೂರ್ಣ ದಾರಿ ತಪ್ಪುವುದನ್ನು ಅರಿತಂತಹ ಖಾಸಗಿ ಶಾಲಾ ಶಿಕ್ಷಣ ಒಕ್ಕೂಟ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಖಾಸಗಿ ಶಾಲಾ ಶಿಕ್ಷಣ ಒಕ್ಕೂಟ ಈ ಬಗ್ಗೆ ಪೋಷಕರಿಗೆ ಕೂಡ ಶಾಲಾ ಆಡಳಿತ ಮಂಡಳಿಗಳಿಂದ ಸೂಚನೆ ನೀಡಲು ಆದೇಶ ನೀಡಿದ್ದು ಈಗ ನಗರದ ಕೆಲವು ಶಾಲೆಗಳಲ್ಲಿ ಹತ್ತು ದಿನಗಳ ಕಾಲ ರಜೆ ಘೋಷಿಸಿ ಮಕ್ಕಳಿಗೆ ಮನೋರೋಗ ತಜ್ಞರಿಂದ ಆಪ್ತ ಸಮಾಲೋಚನೆ ಸೂಕ್ತ ಮಾರ್ಗದರ್ಶನ ಮತ್ತು ಚಿಕಿತ್ಸೆಯನ್ನು ನೀಡುವಂತೆ ಸಲಹೆ ನೀಡಲಾಗಿದೆ.
ಈ ಬಗ್ಗೆ ಖಾಸಗಿ ಶಾಲೆಯೊಂದರ ಮುಖ್ಯೋಪಾಧ್ಯಾಯರು ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಶಾಲೆಯಲ್ಲಿ ಪೋಷಕರ ಸಭೆ ನಡೆಸುತ್ತೇವೆ ಮಕ್ಕಳ ಬ್ಯಾಗ್ ನಲ್ಲಿ ಈ ರೀತಿಯ ವಸ್ತುಗಳು ಪತ್ತೆ ಆಗಿರುವುದರಿಂದ ಪೋಷಕರು ಕೂಡ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಆಗಿರುವ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ನಮ್ಮೊಂದಿಗೆ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕೆಎಎಂಎಸ್ ಪ್ರಧಾನ ಕಾರ್ಯದರ್ಶಿ, ಡಿ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ನಗರದ ಶೇಕಡಾ 80ರಷ್ಟು ಶಾಲೆಯಲ್ಲಿ ಪರಿಶೀಲಿನೆ ನಡೆಸಿದ್ದೇವೆ ಒಬ್ಬ ವಿದ್ಯಾರ್ಥಿಯ ಬ್ಯಾಂಕಿನಲ್ಲಿ ಗರ್ಭನಿರೋಧಕ ಮಾತ್ರ ಪತ್ತೆಯಾಗಿದೆ ಮತ್ತೊಬ್ಬರ ನೀರಿನ ಬಾಟಲಿಯಲ್ಲಿ ಮಧ್ಯ ಪತ್ತೆಯಾಗಿದೆ. ಈ ಆಘಾತದಿಂದ ಹೊರಬರಲು ನಾವು ಪ್ರಯತ್ನಿಸುತ್ತಿದ್ದೇವೆ. ಕೆಲ ವಿದ್ಯಾರ್ಥಿಗಳು ತನ್ನ ಸಹಪಾಠಿಗಳಿಗೆ ಹಾಗೂ ಶಿಕ್ಷಕರಿಗೆ ಕಿರುಕುಳ ನೀಡುವುದು, ಅಶ್ಲೀಲ ಭಾಷೆ ಬಳಸಿ ಬಯ್ಯುವುದು, ಕೆಟ್ಟ ಸನ್ನೆಗಳನ್ನು ಮಾಡುವುದು ವಿದ್ಯಾರ್ಥಿಗಳಲ್ಲಿ ಕಂಡುಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.