Janataa24 NEWS DESK
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದ್ದು, ಮೂರು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದ್ದು, ಮೂರು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ.
ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರಕ್ಕೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿ ಮತ್ತು ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆಂದು ಮೂಲಗಳು ತಿಳಿಸಿವೆ.