Janataa24 NEWS DESK
ಮಧ್ಯಪ್ರದೇಶ/ಭೋಪಾಲ್
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ.

ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ.