
ಬೆಂಗಳೂರು: ಗದಗ ಜಿಲ್ಲೆಯ ವಿಧಾನ ಸಭೆ ಮತ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಗೆಂದು ಬೆಂಗಳೂರಿಗೆ ಆಗಮಿಸಿದ್ದರು ಸಭೆ ಆರಂಭವಾಗುತಿದ್ದಂತೆ ಕುಸಿದು ಬಿದ್ದಿದ್ದಾರೆ.
ವರ್ತೂರು ಕೋಡಿ ಬಳಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶ್ರೀ ಶೈಲಪ್ಪ ಬಿದರೂರ 1996ರಲ್ಲಿ ರೋಣ ಕ್ಷೇತ್ರದಿಂದ ಜನತಾದಳ ಪಕ್ಷದಿಂದ ಶಾಸಕರಾಗಿದ್ದರು.
ನಂತರ 2008 ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಗದಗದ ಶಾಸಕರಾದರು.

2013ರ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿ ಎಚ್ ಕೆ ಪಾಟೀಲ್ ವಿರುದ್ಧ ಸೋಲು ಕಂಡಿದ್ದರು.

2018ರಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾದ ಇವರು 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಸದ್ಯ ಕಾಂಗ್ರೆಸ್ ನಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದರು.
ರೋಣ ಅಥವಾ ಗದಗ ಮತಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಶ್ರೀ ಶೈಲಪ್ಪ ಬಿದರೂರು ಟಿಕೆಟ್ ಗಾಗಿ ಕೆಪಿಸಿಸಿಗೆ ಅರ್ಜಿ ಹಾಕಿದ್ದರು.

ಇಂದು ಶ್ರೀಶೈಲಪ್ಪ ಬಿದರೂರು ನಿಧನರಾದ ಕಾರಣದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.