ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಯಲ್ಲಿ ಮೊದಲನೆಯ ಗ್ಯಾರಂಟಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಶಾಸಕ ಎಂ.ಟಿ ಕೃಷ್ಣಪ್ಪ.

ತುರುವೇಕೆರೆ: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬೆನ್ನಲ್ಲೇ 5 ಮಹತ್ವದ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇಂದಿನಿಂದ ಆರಂಭವಾಯಿತು.
ತುರುವೇಕೆರೆ ಕ್ಷೇತ್ರದ ಹಾಲಿ ಶಾಸಕರಾದ ಎಂ ಟಿ ಕೃಷ್ಣಪ್ಪ ಅವರು ಇಂದು ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಪ್ರಯಾಣ ಮಾಡುವ ಮಹಿಳೆಯರಿಗೆ ಉಚಿತ ಟಿಕೆಟ್ ಕೊಟ್ಟು ಪ್ರಯಾಣಿಕರಿಗೆ ಸಿಹಿ ಹಂಚಿ ಅವರ ಉಚಿತ ಪ್ರಯಾಣಕ್ಕೆ ಶುಭ ಹಾರೈಸಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟರು.
ಇದೇ ಸಂದರ್ಭದಲ್ಲಿ ನೂರಾರು ಮಹಿಳಾ ಪ್ರಯಾಣಿಕರು ಜೆ ಡಿ ಎಸ್ ಮುಖಂಡರುಗಳು ಕಾರ್ಯಕರ್ತರುಗಳು ಹಾಜರಿದ್ದರು.
ವರದಿ
ತುರುವೇಕೆರೆ: ಮಂಜುನಾಥ್ ಕೆ ಎ