Document

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು.

Janataa24 NEWS DESK

images 1 28

ಬೆಂಗಳೂರು: ಮುರುಘಾ ಶ್ರೀಗಳಿಗೆ ಹೈಕೋರ್ಟ್ನಿಂದ ಜಾಮೀನು ಸಿಕ್ಕಿದೆ. ಒಂದು ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಜಾಮೀನು ಸಿಕ್ಕಿದೆ. ಮುರುಘಾ ಶ್ರೀ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ಪ್ರಕರಣ ಆರೋಪ ವ್ಯಕ್ತವಾಗಿತ್ತು. 7 ಷರತ್ತು ವಿಧಿಸಿ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಜಾಮೀನು ನೀಡಿದೆ.

4dcf7e7c74885222bb528438e1b9d6451669115720631575 original

ಶ್ರೀಗಳಿಗೆ 7 ಷರತ್ತು :

ಚಿತ್ರದುರ್ಗಕ್ಕೆ ಹೋಗುವಂತಿಲ್ಲ ಮುರುಘಾ ಶ್ರೀ
2 ಲಕ್ಷ ರೂಪಾಯಿ ಬಾಂಡ್ ನೀಡ್ಬೇಕು
ಪಾಸ್ ಪೋರ್ಟ್ ಕೋರ್ಟ್ಗೆ ಒಪ್ಪಿಸಬೇಕು
ಇಬ್ಬರು ಶ್ಯೂರಿಟಿ ಕೊಡ್ಬೇಕು
ವಿದೇಶಕ್ಕೆ ಹೋಗುವಂತಿಲ್ಲ
ಸಂತ್ರಸ್ತರಿಗೆ ಬೆದರಿಕೆ ಒಡ್ಡುವಂತಿಲ್ಲ
ಸಾಕ್ಷಿ ನಾಶ ಮಾಡುವಂತಿಲ್ಲ
ಒಂದು ಪ್ರಕರಣದಲ್ಲಿ ಅಷ್ಟೇ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದೆ. 2ನೇ ಪೋಕ್ಸೋ ಕೇಸ್ ಇನ್ನೂ ಇತ್ಯರ್ಥವಾಗಲಿಲ್ಲ. ಮುರುಘಾ ಶ್ರೀ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದು, ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ಬಾಕಿ ಇದೆ. ಇನ್ನೊಂದು ಕೇಸ್ನಲ್ಲಿ ಜಾಮೀನು ಸಿಕ್ಕರಷ್ಟೇ ಮುರುಘಾ ಶ್ರೀಗೆ ರಿಲೀಫ್ ಸಿಗಲಿದೆ.

ಏನಿದು ಪ್ರಕರಣ: ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು.ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಅದಾದ ನಂತರ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು, ಬಳಿಕ ಫೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಪೊಲೀಸರು ಬಂಧಿಸಿದ್ದರು.

Document

Leave a Reply

Your email address will not be published. Required fields are marked *