ಪಾವಗಡ: ಇಮ್ರಾನ್ ಉಲ್ಲಾ

ಪಾವಗಡ ಪಟ್ಟಣದಲ್ಲಿ ದಿನಾಂಕ:22-02-2023ರಂದು ಬೆಳಿಗೆ 11.00 ಗಂಟೆಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣ ಪಾವಗಡ ಮದ್ಯಾಹ್ನ 2.00 ಗಂಟೆವರೆಗೆ ಇಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ವತಿಯಿಂದ ಸಾರ್ವಜನಿಕ ಕುಂದು ಕೊರತೆಗಳ ಸಭೆಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ದೂರು ಅರ್ಜಿಗಳನ್ನು ಸಲ್ಲಿಸಬಹುದು. ಹಾಗೂ ಸದರಿ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.