
Janataa24 NEWS DESK
ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ (Chaithra) ಮತ್ತು ಗ್ಯಾಂಗ್ ಬಹುಕೋಟಿ ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ವಜ್ರದೇಹಿ ಮಠದ (Vajradehi Mutt) ರಾಜಶೇಖರಾನಂದ ಸ್ವಾಮೀಜಿಗೆ (Rajashekharananda swamiji) ಸಿಸಿಬಿ ನೋಟಿಸ್ ಕಳುಹಿಸಿದೆ.

ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಮತ್ತು ಆಕೆಯ ತಂಡ ಗೋವಿಂದ ಬಾಬು ಪೂಜಾರಿ ಎಂಬ ಉದ್ಯಮಿಯಿಂದ ಹಣ ಪಡೆದು ವಂಚಿಸಿ ಪೊಲೀಸರ ಅತಿಥಿಯಾಗಿದ್ದಾರೆ . ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ (CCB) ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು (Bengaluru) ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ವಜ್ರದೇಹಿ ಮಠ(Vajradehi Mutt) ಮಂಗಳೂರಿನ ಗುರುಪುರದಲ್ಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣ ನೋಟಿಸ್ ಜಾರಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ.