ಲಿಂಗಸೂರು: ರವಿ ಬಿ ಕಾಂಬಳೆ
ಆಸ್ಪತ್ರೆಯಲ್ಲಿ ಹಣ ವಸೂಲಿ ಪ್ರಕರಣದಲ್ಲಿ ಇಬ್ಬರು ನರ್ಸ್‌ಗಳನ್ನು ಅಮಾನತು

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಹಣ ವಸೂಲಿ ಪ್ರಕರಣದಲ್ಲಿ ಇಬ್ಬರು ನರ್ಸ್‌ಗಳನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಸುರೇಂದ್ರ ಬಾಬು ಆದೇಶ ಹೊರಡಿಸಿದ್ದಾರೆ.
ಸುದ್ದಿ ಮಾಧ್ಯಮಗಳಲ್ಲಿ ಪ್ರಕಟ ಮಾಡುತ್ತಿದ್ದಂತೆ ಎಚ್ಚೆತ್ತಕೊಂಡ ಆರೋಗ್ಯ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಹೆರಿಗೆಗಾಗಿ 15 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದ ಗೀತಾ ಮತ್ತು ಅಂಜನಮ್ಮ ಎಂಬುವವರನ್ನು ಅಮಾನತು ಮಾಡಲಾಗಿದೆ.
ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಹಜ ಹೆರಿಗೆ ಆಗಿದ್ದರೂ ಸಿಬ್ಬಂದಿ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು, 5 ಸಾವಿರ ರೂಪಾಯಿ ಲಂಚ ಪಡೆದಿದ್ದರು. ಇದರ ವಿಡಿಯೊ ವೈರಲ್ ಆಗಿದ್ದರಿಂದ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.