Document

ಹುಬ್ಬಳ್ಳಿಯಲ್ಲಿ ಖಾಸಗಿ ಬಸ್ ಪಲ್ಟಿ: 14 ಮಂದಿಗೆ ಗಾಯ

Janataa24 NEWS DESK

pro 3

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪಲ್ಟಿಯಾಗಿ 14 ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಪಾಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸಣ್ಣಪುಟ್ಟ ಗಾಯಗೊಂಡಿದ್ದ 11 ಜನರು ಪ್ರಥಮ ಚಿಕಿತ್ಸೆ ಪಡೆದು ತೆರಳಿದ್ದು, ಹೆಚ್ಚಿನ ಗಾಯಗೊಂಡಿರುವ ಪುಣೆ, ಕೋಲ್ಕತ್ತಾ ಮತ್ತು ಹುಬ್ಬಳ್ಳಿಯ ತಲಾ ಒಬ್ಬರು ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Document

Leave a Reply

Your email address will not be published. Required fields are marked *