Janataa24 NEWS DESK
ಇಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ.ವೆಂಕಟೇಶ್ ಪರ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾವಗಡಕ್ಕೆ.

ಪಾವಗಡ: ವಿಧಾನಸಭೆ ಚುನಾವಣೆ ಪ್ರಚಾರದ ಹಿನ್ನಲೆ ಯಲ್ಲಿ ಮೇ 1ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇತರೆ ಗಣ್ಯರು ಪಾವಗಡಕ್ಕೆ ಆಗಮಿಸಲಿದ್ದು ತಾಲೂಕಿನ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ದೊಡ್ಡ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಕೆಳಗಿಳಿಯಲು ಸಿದ್ಧತೆ ಕೈಗೊಂಡಿದ್ದಾರೆ.

ಇಲ್ಲಿನ ಚಳ್ಳಕರೆ ಕ್ರಾಸ್ ಬಳಿಯ ಸುಮಾರು 10 ಎಕರೆ ಜಮೀನಿನಲ್ಲಿ ಮಳೆ ಗಾಳಿಗೆ ತಡೆಯೊಡ್ಡುವ ಜಪಾನ್ ಮಾದರಿಯ ಸುಸಜ್ಜಿತವಾದ ಬೃಹತ್ ವೇದಿಕೆಯ ಸಿದ್ಧತೆ ಕೈಗೊಂಡಿದ್ದು, 1:30 ಗಂಟೆಗೆ ಕಾಪ್ಟರ್ ಮೂಲಕ ಆಗಮಿಸುವ ಸಿದ್ದರಾಮಯ್ಯರನ್ನು ಕ್ರೀಡಾ೦ಗಣದಲ್ಲಿ ಸ್ವಾಗತಿಸಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಕಾರಿನಲ್ಲಿ ರೋಡ್ ಶೋ ಮೂಲಕ ವೇದಿಕೆ ಆಗಮಿಸಲಿದ್ದು ಇದಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಸಲ್ಲಿಸಿ, ಶ್ರೀ ಶನೇಶ್ವರಸ್ವಾಮಿ ವೃತ್ತಕ್ಕೆ ತೆರಳಿ, ಅಲ್ಲಿಂದ ವಾಪಸಾಗಿ ಬಳ್ಳಾರಿ ರಸ್ತೆ ಮೂಲಕ ಚಳ್ಳಕರೆ ಕ್ರಾಸ್ ನಿರ್ಮಿಸಿದ್ದ ಬೃಹತ್ ವೇದಿಕೆಗೆ ಆಗಮಿಸಿ ಸಮಸ್ತ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕ ಉಗ್ರನರಸಿಂಹಪ್ಪ, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷ ಸುದೇಶ್‌ಬಾಬು, ಮುಖಂಡರಾದ ಎ. ಶಂಕರರೆಡ್ಡಿ, ಕಾಂಗ್ರೆಸ್ ಅಧ್ಯಕ್ಷ ವಿರಪಸಮುದ್ರ ರಾಮಾಂಜಿನಪ್ಪ, ಅಲ್ಪಸಂಖ್ಯಾತರ ಘಟಕದ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಕಾಂಗ್ರೆಸ್ ಮುಖಂಡರು ಭಾಗವಹಿಸಲಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ವರದಿ
ಪಾವಗಡ:ಇಮ್ರಾನ್ ಉಲ್ಲಾ.