Document

2nd PUC Results: ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಫಸ್ಟ್ ..!

Janataa24 NEWS DESK 

2nd PUC Results: ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಫಸ್ಟ್ ..!2nd puc results 2025-mafhu bangarappa

ಇಂದು ಬೆಂಗಳೂರಿನ “ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಸುದ್ದಿಗೋಷ್ಟಿ ನೆಡೆಸಿ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡುಗಡೆಗೊಳಿಸಿದರು.

 

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಮುಂದಿನ ಶೈಕ್ಷಣಿಕ ಜೀವನ ಉತ್ತಮವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪ ಶುಭ ಹಾರೈಸಿದರು.

 

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆತಂಕ ಪಡದೇ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಿ ಯಶಸ್ಸುಗಳಿಸಿ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾಬಾಯಿ ಲಾರಿ ಡ್ರೈವರ್ ಮಗಳು ಅನ್ನೋದು ವಿಶೇಷ.
 

 

 

#PUC #ಪಿಯುಸಿ_ಫಲಿತಾಂಶ 

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಅಮೂಲ್ಯ ಕಾಮತ್‌ 599 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ವಿಜಯನಗರದ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.
2nd puc results 2025-madhu bangarappa
ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್‌?

ಉನ್ನತ ಶ್ರೇಣಿ- 1,00,571

ಪ್ರಥಮ ದರ್ಜೆ- 2,78,054

ದ್ವೀತಿಯ ದರ್ಜೆ-70969

ತೃತೀಯ ದರ್ಜೆ-18845

 

ವಿಭಾಗವರು ಸಾಧನೆ

ಕಲಾ

ಹಾಜರಾದವರು :1,53,043

ಉತ್ತೀರ್ಣ- 81,533 (53.79%)

 

ವಾಣಿಜ್ಯ

ಹಾಜರಾದವರು -2,04,329

ಉತ್ತೀರ್ಣ -1,55,425 (76.07%)

 

ವಿಜ್ಞಾನ

ಹಾಜರಾದವರು – 2,80,433

ಉತ್ತೀರ್ಣ – 2,31,461 (82.54%)

 

ಮಾಧ್ಯಮವಾರು ಫಲಿತಾಂಶ

ಕನ್ನಡ

ಹಾಜರಾದವರು -2,08,794

ತೇರ್ಗಡೆಯಾದವರು – 1,17,703 (56.37%)

 

ಇಂಗ್ಲೀಷ್‌

ಹಾಜರಾದವರು -4,29,011

ತೇರ್ಗಡೆಯಾದವರು -3,50,736(81.75%)

 

ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.

 

 
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.


 

Document

Leave a Reply

Your email address will not be published. Required fields are marked *