Janataa24 NEWS DESK
Arvind Kejriwal: ಚುನಾವಣೆ ಹೊತ್ತಿನಲ್ಲಿಯೇ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಮೇಲೆ ಇಡಿ ರೈಡ್.

ನವದೆಹಲಿ: ಚುನಾವಣೆ ಹೊತ್ತಿನಲ್ಲಿಯೇ ದೆಹಲಿ ಸಿಎಂ ಕ್ರೇಜಿವಾಲ್ ಅವರಿಗೆ ಸಂಕಷ್ಟ. ಹಲವು ಅನುಮಾನಗಳಿಗೆ ತೆರೆ ಎಳೆದ ಇಡಿ ರೈಡ್. ಎನ್ ಡಿ ಎ ನೇತೃತ್ವದ ನರೇಂದ್ರ ಮೋದಿ ಕೇಂದ್ರ ಸರ್ಕಾರ ಜಾರಿಗೆ ಬಂದಾಗಿನಿಂದಲೂ ಸರ್ಕಾರ ಚುನಾವಣೆ ವೇಳೆ ವಿರೋಧ ಪಕ್ಷಗಳನ್ನು ಬಗ್ಗು ಬಡಿಯಲು ಐಟಿ ಇಡಿ ಬಳಸಿಕೊಳ್ಳುತ್ತಿದೆ ಎಂಬ ಅರೋಪಗಳು ದಟ್ಟವಾಗಿ ಕೇಳಿ ಬರುತ್ತಿದೆ.
ಹಾಗಾಗಿ ಚುನಾವಣೆ ಹೊತ್ತಿನಲ್ಲಿ ದೆಹಲಿ ಆಮ್ ಆದ್ಮಿ ಪಾರ್ಟಿಯ ದೆಹಲಿ ಮುಖ್ಯಮಂತ್ರಿ (Chief Minister of Delhi)ಆರೆಸ್ಟ್ ಆಗಿರುವುದು ಕೇಂದ್ರ ಸರ್ಕಾರದ ನಡೆಗೆ ಹಿಡಿದ ಕೈಗನ್ನಡಿ ಎನ್ನುವಂತೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಅಬಕಾರಿ ನೀತಿ ಜಾರಿಗೆ ತರುವಾಗ ಮಾಡಿರುವ ನೂರಾರು ಕೋಟಿ ರೂಪಾಯಿ ಹಗರಣ ಪ್ರಕರಣದಲ್ಲಿ ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 28ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ ಅಧಿಕಾರಿಗಳು ದೆಹಲಿಯ ಅವರ ನಿವಾಸದಿಂದ ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದರು.
ಬಳಿಕ ಅವರನ್ನು ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಿದ್ದಾರು. ಇನ್ನೂ ದೆಹಲಿ ಅಬಕಾರಿ ನೀತಿ ಹಗರಣದ ಕಿಂಗ್ ಪಿಂಗ್ ಅರವಿಂದ್ ಕೇಜ್ರಿವಾಲ್ ಎಂದು ಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೆ, 10 ದಿನಗಳವರೆಗೆ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದ್ದು, ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ
ಇ.ಡಿ ಅಧಿಕಾರಿಗಳು ಕೋರ್ಟ್‌ಗೆ ತಿಳಿಸಿದ್ದೇನು?
– ಅಬಕಾರಿ ನೀತಿ ಜಾರಿ ವೇಳೆ ಸುಮಾರು 100 ಕೋಟಿ ರೂಪಾಯಿ ಅಕ್ರಮ ನಡೆದಿದೆ
– ಅಬಕಾರಿ ನೀತಿ ಜಾರಿ ಹಗರಣದ ಕಿಂಗ್‌ಪಿನ್ ಎಂದರೆ ಅರವಿಂದ್ ಕೇಜ್ರಿವಾಲ್.
– ಹವಾಲ ದಂಧೆ ಮೂಲಕವೇ 45 ಕೋಟಿ ರೂಪಾಯಿ ಅಕ್ರಮ ನಡೆದಿದೆ.
– ಹವಾಲ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ.
– ಉದ್ಯಮಿಗಳಿಂದ ಲಂಚದ ಬೇಡಿಕೆ ಪ್ರಕರಣಕ್ಕೆ ಅರವಿಂದ್ ಕೇಜ್ರಿವಾಲ್ ರೂವಾರಿ.
– ಇ.ಡಿ ಅಧಿಕಾರಿಗಳ ಪರಿಶೀಲನೆ ವೇಳೆ ದೆಹಲಿ ಸಿಎಂ ಸಹಕಾರ ನೀಡಿಲ್ಲ ಪ್ರತಿ ಬಾರಿ ಸಮನ್ಸ್ ನೀಡಿದಾಗಲೂ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ.
ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. “ದೆಹಲಿಯ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ. ಆಪ್ ಸರ್ಕಾರದ ನಾಲ್ವರು ಪ್ರಮುಖರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸುವ ಅವಶ್ಯಕತೆಯೇ ಇಲ್ಲ. ಅವರಿಗೆ ಕಾರಣವನ್ನೇ ತಿಳಿಸದೆ ಬಂಧಿಸುವ ಪ್ರಕರಣವೂ ಇದಾಗಿಲ್ಲ” ಎಂದು ತಿಳಿಸಿದರು.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು.
ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಅರವಿಂದ್ ಅವರಿಗೆ ಅಬಕಾರಿ ನೀತಿ ನ್ಯಾಯಾಂಗ ತೊಡಕು ಅಷ್ಟೇ ಅಲ್ಲ . ಅರವಿಂದ್ ಕೇಜ್ರಿವಾಲ್ ವಿರುದ್ಧ ಅಬಕಾರಿ ನೀತಿ ಹಗರಣ ಮಾತ್ರವಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.
ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ದೆಹಲಿ ಹೈಕೋರ್ಟ್ ಇವರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಈಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube