Janataa24 NEWS DESK
Tumkur: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಮೇಲೆ ಬಿಜೆಪಿಯವರಿಂದ ಹಲ್ಲೆ.

ತುಮಕೂರು : ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಘಟನೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರನಾದ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ.ಕೆ ಸುರೇಶ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕೀರ್ತಿ ನಾಮಿನೇಷನ್ ಗೆ ಹೋಗಿದ್ದರು. ಏಕೆ ನಾಮಿನೇಷನ್ ಗೆ ಹೋಗಿ ಇದ್ದೀಯಾ ಎಂದು ಹಲ್ಲೆ ಮಾಡಿ ಚಾಕುವಿನಿಂದ ತಿವಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕುಣಿಗಲ್ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ವೆಂಕಟಗೌಡನ ಪಾಳ್ಯದ ಕೀರ್ತಿ (Keerthi)ಎನ್ನುವ ಕಾರ್ಯಕರ್ತ ಹಲ್ಲೆಗೊಳಗಾಗಿದ್ದಾನೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾದ ಚಂದ್ರ, ಜಗದೀಶ, ಸುನೀಲ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿನ ಆರೋಪಿಗಳು ರಾಜಕೀಯ ದ್ವೇಷಕ್ಕೆ ಹಲ್ಲೆ ಮಾಡಿದ್ದಾರೆಂದು ಕೀರ್ತಿ ದೂರು ನೀಡಿದ್ದಾರೆ.
ಶನಿವಾರ ಸಾಯಂಕಾಲ ನಡೆಮಾವಿನಪುರ ಗ್ರಾಮ ಪಂಚಾಯಿತಿ ಆವರಣದ ಬಳಿ ಮೂವರು ಗಲಾಟೆ ಮಾಡಿದ್ದಾರೆ ಬಳಿಕ ದೊಣ್ಣೆಯಿಂದ ಹಲ್ಲೆ ನಡೆಸಿ ಚಾಕುವಿನಿಂದ ತಿವಿದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದ್ಯ ಈ ಘಟನೆ ಕುರಿತು ಕೀರ್ತಿ ಅವರು ಕುಣಿಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube