Acche Din: 2014 ರಲ್ಲಿ ಡೀಸೆಲ್ ಲೀಟರ್‌ಗೆ 49 ರೂ.ಗಳಿತ್ತು, ಇಂದು 95 ರೂ- ಅಚ್ಚೆ ದಿನ ಯಾವಾಗ ಪ್ರಶ್ನಿಸಿದ ಸಿದ್ದರಾಮಯ್ಯ

Janataa24 NEWS DESK 

Acche Din: 2014 ರಲ್ಲಿ ಡೀಸೆಲ್ ಲೀಟರ್‌ಗೆ 49 ರೂ.ಗಳಿತ್ತು, ಇಂದು 95 ರೂ- ಅಚ್ಚೆ ದಿನ ಯಾವಾಗ ಪ್ರಶ್ನಿಸಿದ ಸಿದ್ದರಾಮಯ್ಯ

 

Acche Din,siddaramaiah,

ಬೆಂಗಳೂರು: 2014ರಲ್ಲಿ ಡೀಸೆಲ್ ಬೆಲೆ ಒಂದು ಲೀಟರ್‌ಗೆ 49 ರೂ.ಗಳಿತ್ತು, ಇಂದು 95 ರೂ. ಆಗಿದೆ. ಪೆಟ್ರೋಲ್ ಬೆಲೆ 71 ರೂ.ಗಳಿತ್ತು, ಈಗ 110 ರೂ.ಗಳಾಗಿದೆ. ಸಿಲಿಂಡರ್ ಬೆಲೆ ₹410 ಇದ್ದರೆ ಈಗ 950 ರೂ.ಗಳಾಗಿದೆ. ಇಡೀ ದೇಶದ ಜನರಿಗೆ ಅಚ್ಚೇ ದಿನ್ ಆಯೇಗಾ ಎಂದು ನರೇಂದ್ರ ಮೋದಿ ಹೇಳಿದ್ದರು. ಒಳ್ಳೇ ದಿನಗಳು ಬಂದವೇ?

 

ಮೇಕ್ ಇನ್ ಇಂಡಿಯಾ ಎಂದರು, ಇಂದಿನವರೆಗೆ ಮೇಕ್ ಇನ್ ಇಂಡಿಯಾ ಆಗಲಿಲ್ಲ. ಇಂದಿಗೂ ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಲೇ ಇದ್ದಾರೆ.

 

ಸಬ್ ಕಾ ಸಾತ್, ಸಬ್ ಕಾ ವಿಶ್ವಾಸ್ ಎನ್ನುತ್ತಾರೆ. ಈ ದೇಶದ 140 ಕೋಟಿ ಜನರ ಅಭಿವೃದ್ಧಿ ಎಂದರು, ಇಂದಿಗೂ ಏನೂ ಮಾಡಲಿಲ್ಲ. ಇವರು ಅಭಿವೃದ್ಧಿ ಮಾಡಿರುವುದು ಅದಾನಿ, ಅಂಬಾನಿ, ಟಾಟಾ, ಬಿರ್ಲಾ ಅವರನ್ನು ಹೊರತು ಬಡವರ, ರೈತರ, ಮಹಿಳೆಯರ ಅಭಿವೃದ್ಧಿ ಆಗಲಿಲ್ಲ. ಇಷ್ಟಾದರೂ ಬಿಜೆಪಿ ಪಕ್ಷಕ್ಕೆ ಮತ ಹಾಕಬೇಕಾ?

 

ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ(Siddaramaiah)ನವರು ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿದ್ದಾರೆ.

https://twitter.com/siddaramaiah/status/1778749138114576497?t=1lInbOkjFRxuFqSF30-tdA&s=19

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://www.janataa24.com/turuvekere-a-man-who-died-on-the-spot-when-his-c/

Leave a Reply

Your email address will not be published. Required fields are marked *