Janataa24 NEWS DESK
Gubbi: ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರವು ಸುಳ್ಳು ಆಶ್ವಾಸನೆ ನೀಡುವ ಸರ್ಕಾರವಾಗಿದೆ- ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಸರ್ಕಾರ ವಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಸ್ ಆರ್, ಶ್ರೀನಿವಾಸ್(SR Srinivas) ವಾಗ್ದಾಳಿ ನಡೆಸಿದರು. ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣಮ್ಮ ದೇವಾಲಯಕ್ಕೆ ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದನುಮೇಗೌಡ(Muddahanumegowda) ಪರ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರವು ಸುಳ್ಳು ಆಶ್ವಾಸನೆಯನ್ನು ನೀಡುವ ಸರ್ಕಾರವಾಗಿದೆ.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ(BJP) ಸರ್ಕಾರವು ಉಳ್ಳವರ ಪರ ಸರ್ಕಾರವಾಗಿದೆ. ರೈತರು ಬೆಳೆದ ಬೆಳೆಗಳಿಗೆ, ಹಾಲು ಮೊಸರಿನ ದರದ ಮೇಲೆ, ಕೃಷಿ ಯಂತ್ರೋಪಕರಣ, ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರಗಳ ಮೇಲೆ, ಮಾರುಕಟ್ಟೆಯಲ್ಲಿ ಹೆಚ್ಚಿನ ತೆರಿಗೆಯನ್ನು ವಿಧಿಸಿದೆ. ಮೋದಿಯ ಸರ್ಕಾರವು ಆದಾನಿ, ಅಂಬಾನಿ, ದೇಶದ ಪ್ರಮುಖ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಿದೆ. ಮೋದಿಯ 10 ವರ್ಷ ಆಡಳಿತ ಸರ್ಕಾರದಲ್ಲಿ ಸಾಧನೆ ಶೂನ್ಯವಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿ ಗೆ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಗ್ರಾಮೀಣ ಭಾಗದ ತಾಯಂದಿರ ಮೇಲೆ ಕೆಟ್ಟ ಪದ ಬಳಕೆ ಮಾಡಿರುವುದು ಖಂಡನೀಯವಾಗಿದೆ. ಶ್ರೀಯುತ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು(Congress Government)ಬಡವರ, ಶೋಷಿತರ, ದಲಿತರ, ಹಾಗೂ ಹಿಂದುಳಿದ ವರ್ಗದವರ ಪರವಾದ ಸರ್ಕಾರವಾಗಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ದೇಶದ ಜನತೆಯು ಕೈ ಬಲಪಡಿಸುವ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಶಂಕರನಂದ್ ಮಾತನಾಡಿ ಕಾಂಗ್ರೆಸ್ ಪಕ್ಷವು ಜನಪರ ಸರ್ಕಾರವಾಗಿದೆ.
ಬಿಜೆಪಿ ಸರ್ಕಾರದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಬಹಿರಂಗವಾಗಿ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಬಿಜೆಪಿ ಸರ್ಕಾರವು ಹಣವಿದ್ದವರಿಗೆ ಟಿಕೆಟ್ ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಹಣವನ್ನು ಇಟ್ಟುಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷವು ಬಡವರ ಜನಪರ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಚುನಾವಣೆ ನಡೆಸುತ್ತಿದ್ದಾರೆ ಎಂದು ತಿಳಿಸಿ. ಕಳೆದ ವಿಧಾನಸಭೆಯಲ್ಲಿ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಗೆಲುವು ಸಾಧಿಸಿದರೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 1008 ತೆಂಗಿನಕಾಯಿ ಒಡೆಯುವ ಹರಕೆಯನ್ನು ಮಾಡಿಕೊಂಡಿದ್ದರು ಇದೇ ಸಂದರ್ಭದಲ್ಲಿ 1008 ತೆಂಗಿನಕಾಯಿ ಒಡೆಯುವ ಹರಕೆಯನ್ನು ಪೂರ್ಣಗೊಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಕೆ ಆರ್ ವೆಂಕಟೇಶ್, ಕೆ ಆರ್ ತಾತಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ಮುಖಂಡರಾದ ಚಿಕ್ಕ ರಂಗಯ್ಯ, ಶಶಿಧರ್, ಯತೀಶ್, ಚೇಳೂರು ಶಿವನಂಜಪ್ಪ ಮುಂತಾದವರು ಉಪಸ್ಥಿತರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
https://www.janataa24.com/upsc-2023-results-upsc-result-announced-aditya-srivastava-first-position/
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en